ಜಿಲ್ಲಾ ಸುದ್ದಿ

ಹಿರಿಯ ಪತ್ರಕರ್ತ ಬಾಲಕೃಷ್ಣ ಕಾಕತ್ಕರ್ ನಿಧನ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಬಾಲಕೃಷ್ಣ ಕಾಕತ್ಕರ್ ...

ಹಿರಿಯ ಪತ್ರಕರ್ತ ಬಾಲಕೃಷ್ಣ ಕಾಕತ್ಕರ್ ನಿಧನ
ಬಾಲಕೃಷ್ಣ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಬಾಲಕೃಷ್ಣ ಕಾಕತ್ಕರ್ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಕ್ರೈ ಸ್ಟೋರಿಯ ಮೂಲಕ ಮನೆಮಾತಾಗಿದ್ದ ಬಾಲಕೃಷ್ಣ ಅವರು ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ನಾಗರಬಾವಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು.

ಮೂಲತಃ ಕೋಲಾರದವರಾದ ಬಾಲಕೃಷ್ಣ ಅವರು, ಓರ್ವ ಪುತ್ರನನ್ನು ಅಗಲಿದ್ದು, ಅವರ ಪತ್ನಿ ಮನೋರಮಾ ಅವರು 2007ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

'ವಾರಪತ್ರಿಕೆ' ಮೂಲಕ ಪತ್ರಿಕಾರಂಗಕ್ಕೆ ಕಾಲಿಟ್ಟದ್ದ ಬಾಲಕೃಷ್ಣ ಅವರು, ಸಿನಿಮಾ ಸೇರಿದಂತೆ ಕನ್ನಡದ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.