ಜಿಲ್ಲಾ ಸುದ್ದಿ

ಮತ್ತೆ ಅತ್ಯಾಚಾರಿಗಳ ಅಟ್ಟಹಾಸ

ನಗರದಲ್ಲಿ ಅತ್ಯಾಚಾರಿಗಳ ಅಟ್ಟಹಾಸ ಮುಂದುವರೆದಿದ್ದು ಹಲವು ಅತ್ಯಾಚಾರ...

ಮತ್ತೆ ಅತ್ಯಾಚಾರಿಗಳ ಅಟ್ಟಹಾಸ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರದಲ್ಲಿ ಅತ್ಯಾಚಾರಿಗಳ ಅಟ್ಟಹಾಸ ಮುಂದುವರೆದಿದ್ದು ಹಲವು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.

ಮೈಸೂರು ರಸ್ತೆಯಲ್ಲಿರುವ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿನಿ ಮೇಲೆ ಶಾಲೆಯ ಬಸ್ ಚಾಲಕ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಪೊಲೀಸರು ಆರೋಪಿ ಸಂಜೀವಮೂರ್ತಿ(25) ಎಂಬಾತನನ್ನು ಬಂಧಿಸಿದ್ದಾರೆ.

ಅ.25ರಂದು ಸಂಜೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜತೆ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿರುವ ದೇವಸ್ಥಾನಕ್ಕೆ ತೆರಳುತ್ತಿದ್ದಳು. ಆ ವೇಳೆ ಜೋರು ಮಳೆ ಬಂದ ಕಾರಣ ಪಾಳು ಬಿದ್ದ ಮನೆಯೊಂದರ ಬಳಿ ಇದ್ದ ಮರದ ಕೆಳಗೆ ಇಬ್ಬರು ನಿಂತಿದ್ದರು.

ಆರೋಪಿ ಸಂಜೀವ ಕೂಡ ಅಲ್ಲೇ ನಿಂತಿದ್ದ. ಯುವಕನ ಮೊಬೈಲ್ ಫೋನ್ ಕಿತ್ತುಕೊಳ್ಳಲು ಸಂಜೀವ ಯತ್ನಿಸಿದ್ದಾನೆ. ಯುವಕ, ಯುವತಿ ಇಬ್ಬರೂ ಪ್ರತಿರೋಧ ವ್ಯಕ್ತಪಡಿಸಿದ್ದಾಗ ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿ, ಯುವತಿಯನ್ನು ಪಾಳು ಬಿದ್ದಿದ್ದ ಮನೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಬಳಿಕ ಯುವಕನ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ. ಮೊಬೈಲ್‌ನಲ್ಲಿ ವಿಡಿಯೋ ಇದ್ದು ಅದನ್ನು ಸಾಮಾಜಿಕ ತಾಣಕ್ಕೆ ಬಿಡುಗಡೆ ಮಾಡುವುದಾಗಿ ಬೆದರಿಸಿದ್ದರಿಂದ ಯುವತಿ ಪೊಲೀಸರಿಗೆ ದೂರು ನೀಡಿರಲಿಲ್ಲ. ಕೆಲ ದಿನಗಳ ನಂತರ ಯುವತಿಗೆ ಕರೆಮಾಡಿ ಕರೆಯಿಸಿಕೊಂಡು ಅತ್ಯಾಚಾರ ಎಸಗಿದ್ದಾನೆ.

ಮತ್ತೆ ಮತ್ತೆ ಯುವತಿಗೆ ಕರೆ ಮಾಡುತ್ತಿದ್ದ ಆರೋಪಿ, ಹಣ ನೀಡಬೇಕು ಎಂದು ಬೆದರಿಕೆ ಹಾಕುತ್ತಿದ್ದ. ನೊಂದ ಯುವತಿ, ಸ್ನೇಹಿತರ ಮೂಲಕ ಕನ್ನಡ ಸಂಘಟನೆ ಮೂಲಕ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.