ತಂದೆಯ ವಿರುದ್ಧವೇ ಅತ್ಯಾಚಾರ ಆರೋಪ
ಐದು ವರ್ಷದ ಹಿಂದೆ ತಂದೆಯೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದರು...

ಬೆಂಗಳೂರು: ಐದು ವರ್ಷದ ಹಿಂದೆ ತಂದೆಯೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಿ 19 ವರ್ಷದ ಯುವತಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ತನ್ನ ತಂದೆ, 2009ರಲ್ಲಿ(ಆಗ 14 ವರ್ಷದ ಬಾಲಕಿ) ಎರಡು ಬಾರಿ ಅತ್ಯಾಚಾರ ಮಾಡಿದ್ದರು. ಈ ವಿಷಯ ತಾಯಿಗೆ ಗೊತ್ತಿದ್ದರು ರಕ್ಷಣೆಗೆ ಬರಲಿಲ್ಲ ಎಂದು ಪಾಲಕರ ವಿರುದ್ಧ ವಿದ್ಯಾರಣ್ಯಪುರ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ. ದೂರಿನ ಮೇರೆಗೆ ಪೋಕ್ಸೋ ಕಾಯಿದೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ವಿಚಾರಣೆ ನಡೆಸಲು ಕಬ್ಬನ್ ರಸ್ತೆಯಲ್ಲಿ ಇರುವ ಕರ್ನಾಟಕ-ಕೇರಳ ಸಬ್ ಏರಿಯಾ ಸೇನಾ ಕಚೇರಿಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಇಲ್ಲಿಯವರೆಗೂ ಯಾವುದೇ ಉತ್ತರ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್ ಮೂಲದ ಸೈನಿಕನ ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. 20 ದಿನಗಳ ಹಿಂದೆ ಪುತ್ರಿ ಅಪಹರಣವಾಗಿದೆ ಎಂದು ಪಾಲಕರು ದೂರು ಕೊಟ್ಟಿದ್ದರು. ಈ ವೇಳೆ ಮೊಬೈಲ್ ನೆಟ್‌ವರ್ಕ್ ಆಧಾರದ ಮೇಲೆ ಯುವತಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಪತ್ತೆ ಮಾಡಿದ್ದರು.
ವಿಚಾರಣೆ ವೇಳೆ ಯುವತಿ ತಾನು ವಯಸ್ಕಳಾಗಿದ್ದು ಇಷ್ಟಪಟ್ಟು ಪ್ರಿಯಕರನೊಂದಿಗೆ ಹೋಗಿದ್ದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಳು. ಈಗ ಠಾಣೆಗೆ ಆಗಮಿಸಿ ತಂದೆ ವಿರುದ್ಧವೇ ಅತ್ಯಾಚಾರ ಆರೋಪ ಮಾಡಿ ದೂರು ನೀಡಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


