ಡಾ.ರಾಜ್‌ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳಿಂದ ಅಪಮಾನ
ಅನಾವರಣ ಸ್ಥಿತಿಯಲ್ಲಿದ್ದ ಡಾ.ರಾಜ್‌ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳ ಗುಂಪೊಂದು ಹಾನಿ...

ಬೆಂಗಳೂರು: ಡಾ.ರಾಜ್‌ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಇಂದು ಬೆಳಿಗ್ಗೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಡಾ.ರಾಜ್‌ಕುಮಾರ್ ಅಭಿಮಾನಿಗಳು ನಿರ್ಮಿಸಿದ್ದ ಈ ಪ್ರತಿಮೆಯು ನವೆಂಬರ್23ಕ್ಕೆ ಅನಾವರಣಗೊಳ್ಳಲು ಸಿದ್ದವಾಗಿತ್ತು.
ಅನಾವರಣ ಸ್ಥಿತಿಯಲ್ಲಿದ್ದ ಡಾ.ರಾಜ್‌ಕುಮಾರ್ ಪ್ರತಿಮೆಗೆ ಇಂದು ಬೆಳಗ್ಗೆ ಕಿಡಿಗೇಡಿಗಳ ಗುಂಪೊಂದು ಹಾನಿ ಮಾಡುವ ಮೂಲಕ ಅಪಮಾನ ಎಸಗಿದೆ. ಬಲಮುರಿ ಸೇವಾ ಸಮಿತಿಯಿಂದ ನಿರ್ಮಾಣಗೊಂಡು, ನವೆಂಬರ್ 23 ಕ್ಕೆ ಅನಾವರಣಗೊಳ್ಳಲು ಸಿದ್ದತೆ ನಡೆಸಲಾಗಿತ್ತು.
ಅಭಿಮಾನಿಗಳಿಂದ ನಿರ್ಮಾಣಗೊಂಡಿದ್ದ ಡಾ.ರಾಜ್ ಪುತ್ಥಳಿಗೆ ದುಷ್ಕರ್ಮಿಗಳ ಗುಂಪೊಂದು ಹಾನಿ ಮಾಡಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ. ಪುತ್ಥಳಿಗೆ ಹಾನಿ ಮಾಡಿರುವುದನ್ನು ಕಂಡ ಡಾ.ರಾಜ್ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಲ್ಲದೆ ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳು ಭಾಗವಹಿಸಿದ್ದು, ದುಷ್ಕರ್ಮಿಗಳ ವಿರುದ್ದ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಧಾವಿಸಿರುವ ರಾಜರಾಜೇಶ್ವರಿನಗರ ಠಾಣಾ ಪೊಲೀಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪುತ್ಥಳಿಯ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


