ಜಿಲ್ಲಾ ಸುದ್ದಿ

ಮಕ್ಕಳೊಂದಿಗೆ ಸಿಎಂ ಸಂವಾದ

ಮಕ್ಕಳೊಂದಿಗೆ ಸಿಎಂ ಸಂವಾದ
ಸಿದ್ದರಾಮಯ್ಯ(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳೊಂದಿಗೆ ಗುರುವಾರ ಸಂವಾದ ನಡೆಸಿದರು. ಈ ವೇಳೆ, ರಾಜ್ಯದಲ್ಲಿ ಮಕ್ಕಳ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ವಿಷಾದ ವ್ಯಕ್ತಪಡಿಸಿದರು.

ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸಿದ್ದರಾಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಮಕ್ಕಳೊಂದಿಗೆ ಸಂವಾದ ನಡೆಸಿದರು. ಈ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ವಿವಿಧ ಶಾಲೆಗಳ ಸುಮಾರು 200 ಮಕ್ಕಳು ಪಾಲ್ಗೊಂಡಿದ್ದರು.

ಸಂವಾದದಲ್ಲಿ ಹಲವು ಮಕ್ಕಳು ಸಿದ್ದರಾಮಯ್ಯ ಅವರಿಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ರಾಜ್ಯದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಇದರ ವಿರುದ್ಧ ಯಾವ ಕ್ರಮಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಮಕ್ಕಳು ದೇವರ ಸಮಾನ. ಇತ್ತೀಚೆಗೆ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು ಪ್ರಾಣಿಗಳಿಗಿಂತಲೂ ಕಡೆ. ಅಂತವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.

ಶಾಲೆಗಳಲ್ಲಿ ಮಕ್ಕಳ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಿಎಂ, ಪರಿಚಿತರಿಂದಲೇ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಾರಿ ಬೆಳವಣಿಗೆ ಎಂದರು. ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಕ್ಕಳಿಗೆ ಭರವಸೆ ನೀಡಿದರು. ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಅಗತ್ಯ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಶಾಲೆಗಳಿಗೆ ನೀಡಲಾಗಿದೆ. ಅದನ್ನು ಪಾಲನೆ ಮಾಡದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸದಸ್ಯ ಕೃಷ್ಣಭಟ್, ಆರೋಗ್ಯ ಸಚಿವ ಯು.ಟಿ ಖಾದರ್ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.