ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿ
ಕಲಬುರ್ಗಿಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಹೈದರಾಬಾದ್-ಕರ್ನಾಟಕವನ್ನು...

ಕಲ್ಬುರ್ಗಿ: ಕಲಬುರ್ಗಿಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲು ನಿರ್ಣಯ ಕೈಗೊಳ್ಳುವಂತೆ ಬಿಜೆಪಿ, ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಲಿಯನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಲಿ ಎಂದು ಮರುನಾಮಕರಣ ಮಾಡಲು ಸಂಪುಟ ಸಭೆ ನಿರ್ಣಯ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಸಂಪುಟ ಸಭೆಗೂ ಮುಂಚೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಭಾಗದ ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರ ನೀಡಿ ರಾಜ್ಯಪತ್ರ ಹೊರಡಿಸಬೇಕು ಎಂದು ಹೇಳಿದ್ದಾರೆ.
ಈ ಭಾಗದಲ್ಲಿ ಹೆಚ್ಚು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಸಂಪುಟ ಸಭೆಯ ದಿನ ಜಿಲ್ಲಾ ಬಿಜೆಪಿಯಿಂದ ಶಾಂತಿಯುತ ಧರಣಿ ನಡೆಸಲಾಗುವುದು ಎಂದಿದ್ದಾರೆ.
ಇದೇ ಸಮಯದಲ್ಲಿ ಮಾಜಿ ಜೆಡಿಎಸ್ ಶಾಸಕ ಸುಭಾಷ್ ಗುತ್ತೇದಾರ್ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


