ಜಿಲ್ಲಾ ಸುದ್ದಿ

ಭವಿಷ್ಯ ಕೇಳಲು ಬಂದ ಟೆಕ್ಕಿ ಮೇಲೆ ಲೈಂಗಿಕ ದೌರ್ಜನ್ಯ: ಜ್ಯೋತಿಷಿ ಬಂಧನ

ತನ್ನ ಮದುವೆಯ ಬಗ್ಗೆ ಭವಿಷ್ಯ ಕೇಳಲು ಬಂದ 25 ವರ್ಷದ ಸಾಫ್ಟ್‌ವೇರ್...

ಭವಿಷ್ಯ ಕೇಳಲು ಬಂದ ಟೆಕ್ಕಿ ಮೇಲೆ ಲೈಂಗಿಕ ದೌರ್ಜನ್ಯ: ಜ್ಯೋತಿಷಿ ಬಂಧನ
ದಾಮೋಧರನ್
Published On :

ಬೆಂಗಳೂರು: ತನ್ನ ಮದುವೆಯ ಬಗ್ಗೆ ಭವಿಷ್ಯ ಕೇಳಲು ಬಂದ 25 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಜ್ಯೋತಿಷಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಹೊಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿಯ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಯುವತಿ ಮೇಲೆ ತಮಿಳುನಾಡು ಮೂಲದ ಜ್ಯೋತಿಷಿ ದಾಮೋಧರನ್ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿದ್ದಾನೆ.

ಬುಧವಾರ ಯುವತಿ ತನ್ನ ಸ್ನೇಹಿತೆಯೊಂದಿಗೆ ಮದುವೆಯ ಕುರಿತು ಭವಿಷ್ಯ ಕೇಳಲು ದಾಮೋಧರನ್ ಬಳಿ ಹೋಗಿದ್ದಳು. ಈ ವೇಳೆ ಜ್ಯೋತಿಷಿ ತನ್ನ ಸ್ನೇಹಿತೆಯನ್ನು ಹೊರಗೆ ಕಳುಹಿಸಿ, ತನಗೆ ಕುಡಿಯಲು ತೀರ್ಥದಂತಹ ಪದಾರ್ಥ ನೀಡಿ, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಜ್ಯೋತಿಷಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವ ವೇಳೆ ಜ್ಯೋತಿಷಿಯ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿರುವ ಯುವತಿ, ಅತ್ಯಾಚಾರ ನಡೆಸಿದ ನಂತರ ಮತ್ತೆ ಮರುದಿನ ಬರುವಂತೆ ತನಗೆ ಒತ್ತಾಯ ಮಾಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.