ಆರೋಪಿಗೆ ಮರ್ಮಾಘಾತ
ತಾಯಿಯೊಂದಿಗೆ ಬಟ್ಟೆ ತೊಳೆಯುತ್ತಿದ್ದ 10 ವರ್ಷದ ಬಾಲಕಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ...

ಕೃಷ್ಣರಾಜಪುರ: ತಾಯಿಯೊಂದಿಗೆ ಬಟ್ಟೆ ತೊಳೆಯುತ್ತಿದ್ದ 10 ವರ್ಷದ ಬಾಲಕಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಾರ್ಮಾಂಗವನ್ನು ತೋರಿಸಿದ ದುಷ್ಕರ್ಮಿಯನ್ನು ಹಿಡಿದ ಸಾರ್ವಜನಿಕರು, ಆತನ ಬಟ್ಟೆ ಬಿಚ್ಚಿ ನಗ್ನಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ, ಹಿಗ್ಗಾಮಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಕಾಡುಗುಡಿಯಲ್ಲಿ ನಡೆದಿದೆ.
ಆಂಧ್ರ ಪ್ರದೇಶ ಮೂಲದ ಅಶೋಕ್(30) ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗೂಸಾ ತಿಂದವ. ಆರೋಪಿ ಪಲಮನೇರು ಜಿಲ್ಲೆಯವನು ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಅಪರಿಚಿತನಂತೆ ಆಗಾಗ ಕಾಣಿಸಿಕೊಲ್ಳುತ್ತಿದ್ದ ಆರೋಪಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗುತ್ತಿದ್ದ.
ಭಾನುವಾರ ಬೆಳಗ್ಗೆ ಕಾಡುಗುಡಿ ಸಮೀಪದ ಬೆಳೆತೂರಿನ ಅಪಾರ್ಟ್ಮೆಂಟ್ವೊಂದರ ಬಳಿ ಮಹಿಳೆಯೊಬ್ಬರು ಮಗಳೊಂದಿಗೆ ಬಟ್ಟಿ ತೊಳೆಯುತ್ತಿದ್ದರು. ಸ್ವಲ್ಪ ಸಮಯದ ನಂತರ ಕೆಲಸದ ನಿಮಿತ್ತ ಸಮೀಪದಲ್ಲಿದ್ದ ಮನೆಗೆ ತೆರಳಿದ್ದಾರೆ.
ಅಲ್ಲೆ ಹೊಂಚು ಹಾಕಿದ್ದ ಆರೋಪಿ ಅಶೋಕ್, ಬಾಲಕಿಯನ್ನು ಚಾಕಲೇಟ್ ಕೊಡಿಸುವ ಆಮಿಷವೊಡ್ಡಿ ಸಮೀಪದ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ತನ್ನ ಬಟ್ಟೆ ಬಿಚ್ಚಿ ಮರ್ಮಾಂಗವನ್ನು ಬಾಲಕಿಗೆ ತೋರಿಸಿದ್ದಾನೆ. ಬಾಲಕಿ ಭಯಗೊಂಡು ಕಿರುಚಾಡಿ ಓಡಿ ಬಂದಿದ್ದಾಳೆ.
ಇದನ್ನು ಕಂಡ ಅಲ್ಲಿನ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಬಟ್ಟೆ ಬಿಚ್ಚಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ಇದೇ ರೀತಿ ಹಲವು ಮಹಿಳೆಯರು ಮತ್ತು ಬಾಲಕಿಯರಿಗೆ ತನ್ನಮಾರ್ಮಾಂಗ ತೋರಿಸಿ ವಿಲಕ್ಷಣ ಸುಖ ಅನುಭವಿಸುವ ಕಾಮುಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಡುಗುಡಿ ಪೊಲೀಸರು ತನಿಕೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


