ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ
ಕಮ್ಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಆಯ್ಯಣ್ಣ ಎಂಬಾತನ ಮೇಲೆ..

ಬೆಂಗಳೂರು: ಕಮ್ಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಆಯ್ಯಣ್ಣ ಎಂಬಾತನ ಮೇಲೆ ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ಅಯ್ಯಣ್ಣ ಎಟಿಎಂ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮದ್ಯದ ನಶೆಯಲ್ಲಿದ್ದ ಇಬ್ಬರು ಎಟಿಎಂ ಕೇಂದ್ರದ ಮುಂದೆ ಜಗಳ ಮಾಡುತ್ತಿದ್ದರು. ಸ್ಥಳಕ್ಕೆ ಬಂದ ಅಯ್ಯಣ್ಣ ಎಟಿಎಂ ಕೇಂದ್ರದ ಮುಂದೆ ಜಗಳ ಮಾಡಬೇಡಿ ನಡೀರಿ ಎಂದು ಹೇಳಿದ್ದಾನೆ. ಇದರಿಂದ ಕುಪಿತಗೊಂಡ ಆರೋಪಿಗಳು ಅಯ್ಯಣ್ಣನ ಕೈಯಲ್ಲಿದ್ದ ಲಾಠಿಯನ್ನು ಕಿತ್ತುಗೊಂಡು ಹಲ್ಲೆ ನಡೆಸಿದ್ದಾರೆ. ಕಿರುಚಾಟ ಕೇಳಿದ ಪಕ್ಕದ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಗಮ್ಮನ ಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


