ಬಂಧನ ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರ ಪ್ರತಿಭಟನೆ
ಭಿಕ್ಷಾಟನೆಯಲ್ಲಿ ತೊಡಗಿರುವ ತೃತೀಯ ಲಿಂಗಿಗಳನ್ನು ಬಂಧಿಸಿ ಭಿಕ್ಷುಕರ ಕೇಂದ್ರಕ್ಕೆ...

ಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿರುವ ತೃತೀಯ ಲಿಂಗಿಗಳನ್ನು ಬಂಧಿಸಿ ಭಿಕ್ಷುಕರ ಕೇಂದ್ರಕ್ಕೆ ಕಳುಹಿಸಿರುವ ಪೊಲೀಸರ ಕ್ರಮ ವಿರೋಧಿಸಿ 'ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ' ಸದಸ್ಯರು ಪುರಭವನ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಸೋಮವಾರದಿಂದ ನಗರದ ಸಿಗ್ನಲ್‌ಗಳು, ಅಂಗಡಿಗಳ ಬಳಿ, ಮಾರುಕಟ್ಟೆ ಪ್ರದೇಶದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 150ಕ್ಕೂ ಅಧಿಕ ಭಿಕ್ಷುಕರನ್ನು ಭಿಕ್ಷಾಟನೆ ನಿರ್ಮೂಲನೆ ಕಾಯಿದೆ ಅನ್ವಯ ಪೊಲೀಸರು ವಶಕ್ಕೆ ತೆಗೆದುಕೊಂಡು ಮಾಗಡಿ ರಸ್ತೆಯಲ್ಲಿರುವ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದರು. ಹೀಗಾಗಿ ತೃತಿಯ ಲಿಂಗಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷೆ ಅಕ್ಕೈ ಪದ್ಮಶಾಲೆ 'ಭಿಕ್ಷಾಟನೆ ನಿರ್ಮಾಲನ ಕಾಯ್ದೆ' ಅನುಷ್ಠಾನ ಮಾಡುವ ನೆಪದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಪ್ರಮುಖ ಜಂಕ್ಷನ್, ಅಂಕಡಿ ಮುಂಭಾಗ ಭಿಕ್ಷೆ ಬೇಡುವವರನ್ನು ಬಂಧಿಸಿ, ಭಿಕ್ಷುಕರ ಕೇಂದ್ರಕ್ಕೆ ಬಿಡಲಾಗಿದೆ. ಅಲ್ಲಿ ಸರಿಯಾದ ಊಟ, ನೀರು ಬಟ್ಟೆಕೊಟ್ಟಿಲ್ಲ ಶೌಚಾಗೃಹ ಬಳಸದಂತೆ ತಡೆದು ಹಿಂಸಿಸಲಾಗಿದೆ. ಸಮಾಜದ ಮುಖ್ಯವಾಹಿನಿಗೆ ತರಬೇಕಾದ ಸರ್ಕಾರವೇ ಪೊಲೀಸರ ಮೂಲಕ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


