2ವರ್ಷದ ಹಸುಳೆ ಮೇಲೆ ಯುವಕನಿಂದ ಅತ್ಯಾಚಾರ
ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ 2 ವರ್ಷದ ಹಸುಳೆಯ ಮೇಲೆ ಅತ್ಯಾಚಾರ...

ಗದಗ: ಸಮಾಜದಲ್ಲಿ ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಾಗರೀಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ವೃದ್ಧ ಮಹಿಳೆಯರ, ಅಪ್ರಾಪ್ತೆ ಮಹಿಳೆಯರ, ಶಾಲಾ ಮಕ್ಕಳ ಮೇಲೆ ಕಾಮದೃಷ್ಟಿ ಬೀರುತ್ತಿದ್ದ ಕಾಮುಕರು ಇದೀಗ ಹಸುಗೂಸುಗಳ ಮೇಲೆ ಕೆಂಗಣ್ಣು ಬೀರುತ್ತಿದ್ದು, ಇಂತಹ ನಾಚಿಗೇಡಿನ ಸಂಗತಿಯೊಂದು ಗದಗದಲ್ಲಿ ಬೆಳಕಿಗೆ ಬಂದಿದೆ.
2 ವರ್ಷದ ಕಂದಮ್ಮನ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿದ್ದಾನೆ. ಈ ಹೀನ ಕೃತ್ಯ ನಡೆದಿರುವುದು ಗದಗ ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಈ ಘಟನೆ ಗದಗ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದೆ.
25 ವರ್ಷದ ಪ್ರವೀಣ್ ಈ ಪೈಶಾಚಿಕ ಕೃತ್ಯವೆಸಗಿದ ಕಾಮುಕ. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ 2 ವರ್ಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದನು. ಮಗುವಿನ ಕಿರುಚಾಟ ಕೇಳಿ ಬಂದ ಪೋಷಕರು ಮಗುವನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗವಿನ ಆರೋಗ್ಯಸ್ಥಿತಿ ಚಿಂತಾಜನಕವಾಗಿದ್ದು, ಪುಟ್ಟ ಕಂದಮ್ಮನಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಪರಿಸ್ಥಿತಿ ಕುರಿತು ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.
ಘಟನೆಯ ಬಳಿಕ ಪರಾರಿಯಾಗಿದ್ದ ಪ್ರವೀಣ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದ ವೇಳೆಯಲ್ಲಿ ಗ್ರಾಮಸ್ಥರು ಆತನನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಪ್ರವೀಣ್ ವಿರುದ್ಧ ಗದಗ ಗ್ರಾಮೀಣ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


