ಹಾಸ್ಯ ನಟ ಸಾಧು ಕೋಕಿಲಾ ಮೊಬೈಲ್ ಕಳವು

ಬೆಂಗಳೂರು: ಡಾ. ರಾಜ್ ಕುಮಾರ್ ಸ್ಮಾರಕ ಉದ್ಘಾಟನೆ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಶನಿವಾರ ನಡೆದ ರಸಸಂಜೆ ಕಾರ್ಯಕ್ರಮದ ಸಂದರ್ಭದಲ್ಲಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರ ಮೊಬೈಲ್ ಫೋನ್ ನನ್ನು ದುಷ್ಕರ್ಮಿಗಳು ಕದ್ದಿದ್ದಾರೆ.
ತಮ್ಮ ಕಾರಿನಿಂದ ಇಳಿದ ಸಾಧು ಕೋಕಿಲಾ ಅವರು ವೇದಿಕೆ ಬಳಿ ಹೋಗಿದ್ದರು. ಆದರೆ, ಕೆಲ ನಿಮಿಷಗಳಲ್ಲೇ ಮರೆತುಹೋಗಿದ್ದ ಮೊಬೈಲ್ ಫೋನ್ ತೆಗೆದುಕೊಂಡು ಹೋಗಲು ವಾಪಸ್ ಬಂದರು. ಅಷ್ಟೊತ್ತಿಗಾಗಲೇ ಮೊಬೈಲ್ ಕಳವಾಗಿತ್ತು. ಕಾರಿನ ಗಾಜನ್ನು ಸರಿಯಾಗಿ ಮುಚ್ಚದ ಕಾರಣ ಕಳ್ಳರಿಗೆ ಕೆಲಸ ಸುಲಭವಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


