ಜಿಲ್ಲಾ ಸುದ್ದಿ

23 ಸಾವಿರ ದಿನಗೂಲಿ ನೌಕರರ ಸೇವೆ ಕಾಯಂ

ರಾಜ್ಯದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ಸರ್ಕಾರಿ ಮುದ್ರಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 23..

23 ಸಾವಿರ ದಿನಗೂಲಿ ನೌಕರರ ಸೇವೆ ಕಾಯಂ
Published On :

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ಸರ್ಕಾರಿ ಮುದ್ರಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 23 ಸಾವಿರ ದಿನಗೂಲಿ ನೌಕರರನ್ನು ಕಾಯಂಗೊಳಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.

ಈ ಸಂಬಂಧ ಶುಕ್ರವಾರ ಅಧಿಕೃತ ಆದೇಶ ಹೊರಡಿಸಲಾಗಿದೆ. ದಿನಗೂಲಿ ನೌಕರರನ್ನು ಕಾಯಂಗೊಳಿಸುವಂತೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಹೋರಾಟವನ್ನು ಮನ್ನಿಸಿ 2012ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಂಡಿತ್ತು. ನಂತರ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿತ್ತು.

ಆದರೆ, ಸರ್ಕಾರ ಬದಲಾದ ನಂತರ ಪ್ರಕ್ರಿಯೆಗೆ ತಡೆಯಾಗಿತ್ತು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯಲ್ಲಿ ಕೆಲ ತಿದ್ದುಪಡಿಯೊಂದಿಗೆ ಪ್ರಸ್ತಾವನೆಯನ್ನು ಒಪ್ಪಿಕೊಂಡಿದ್ದರು.

ಇದಕ್ಕೆ ರಾಜ್ಯಪಾಲರ ಒಪ್ಪಿಗೆಯೂ ದೊರೆತಿದ್ದು, ಈಗ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಇದರೊಂದಿಗೆ ಸರ್ಕಾರದ ವಿವಿಧ ಇಲಾಖೆಗಳಾದ ಅರಣ್ಯ, ಲೋಕಪಯೋಗಿ, ತೋಟಗಾರಿಕೆ, ಸಹಕಾರ, ನಿಗಮ ಮಂಡಳಿಗಳು, ಸರ್ಕಾರಿ ಮುದ್ರಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 'ಡಿ' ದರ್ಜೆಯ ದಿನಗೂಲಿ ನೌಕರರ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.