ಆಂಧ್ರ, ತೆಲಂಗಾಣದಂತೆ ವಿಶೇಷ ಪ್ಯಾಕೇಜ್ ನೀಡಿ: ಸಿಎಂ ಸಿದ್ದು
ಕರ್ನಾಟಕ ರಾಜ್ಯಕ್ಕೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ನೀಡಿದಂತೆ ವಿಶೇಷ ಪ್ಯಾಕೆಜ್ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ತುಮಕೂರು: ಕರ್ನಾಟಕ ರಾಜ್ಯಕ್ಕೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ನೀಡಿದಂತೆ ವಿಶೇಷ ಪ್ಯಾಕೆಜ್ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ತುಮಕೂರಿನ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಮೆಗಾಫುಡ್ಪಾರ್ಕ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಆಂಧ್ರ ಪ್ರದೇಶ ರಾಜ್ಯ ವಿಭಜನೆಯಾದಾಗ ಕೇಂದ್ರ ಸರ್ಕಾರ ಆ ರಾಜ್ಯಗಳಿಗೆ ವಿಶೇಷ ಪ್ಯಾಕೇಜ್ಗಳನ್ನು ಘೋಷಣೆ ಮಾಡಿತ್ತು.
ನಮ್ಮ ಕರ್ನಾಟಕದ ಹೈದರಬಾದ್ ಕರ್ನಾಟಕ ಭಾಗ ಕೂಡ ಸಾಕಷ್ಟು ಹಿಂದುಳಿದಿದ್ದು, ನಮಗೂ ಕೂಡ ಆಂಧ್ರ, ತೆಲಂಗಾಣ ಮಾದರಿಯಂತೆಯೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಈ ರಾಜ್ಯಗಳು ನಮ್ಮ ಅಕ್ಕ-ಪಕ್ಕದ ರಾಜ್ಯಗಳಾಗಿದ್ದು, ನಮಗೆ ಪ್ಯಾಕೇಜ್ ಘೋಷಣೆಯಾಗದಿದ್ದರೆ ಉಭಯ ರಾಜ್ಯಗಳ ನಡುವೆ ಅನಾರೋಗ್ಯಕರ ಸ್ಪರ್ಧೆ ಏರ್ಪಡುತ್ತದೆ. ಹೀಗಾಗಿ ನಮಗೂ ಕೂಡ ವಿಶೇಷ ಆರ್ಥಿಕ ಸಹಾಯದ ಯೋಜನೆಗಳನ್ನು ಘೋಷಿಸಿ ಎಂದು ಸಿದ್ದರಾಮಯ್ಯ ಅವರು ಹೇಳಿದರು.
'ಇಂದು ಸುವರ್ಣಾಕ್ಷರಗಳಲ್ಲಿ ದಾಖಲಿಸಬೇಕಾದ ದಿನವಾಗಿದ್ದು, ದೇಶದ ಮೊದಲ ಫುಡ್ಪಾರ್ಕ್ ಕರ್ನಾಟಕದಲ್ಲಿ ಉದ್ಘಾಟನೆಯಾಗಿದೆ. ಫುಡ್ಪಾರ್ಕ್ ನಿಂದಾಗಿ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಕೇವಲ ಈ ಫುಡ್ಪಾರ್ಕ್ ಘಟಕದಲ್ಲಿಯೇ ಸುಮಾರು 10 ಸಾವಿರ ಉದ್ಯೋಗ ಸೃಷ್ಟಿಯಾಗಿದೆ. ಇದರಿಂದ ರಾಜ್ಯದ ಸುಮಾರು 25 ಸಾವಿರ ರೈತರಿಗೆ ಅನುಕೂಲವಾಗಲಿದೆ.
ರಾಜ್ಯದಲ್ಲಿ ವಿವಿಧ ಬೆಳೆಗಳು ಮತ್ತು ಹಣ್ಣು-ತರಕಾರಿಗಳನ್ನು ಬೆಳೆಯಲಾಗುತ್ತಿದೆ. ಆದರೆ ಸೂಕ್ತ ಮಾರುಕಟ್ಟೆ ಇಲ್ಲದೆ ಮತ್ತು ಉತ್ತಮ ಗುಣಮಟ್ಟದ ಗೋದಾಮುಗಳಿಲ್ಲದೆ ರೈತರ ಬೆಳೆ ಹಾಳಾಗುತಿದ್ದು, ರೈತರಿಗೆ ಮಾರುಕಟ್ಟೆಗಳಲ್ಲಿಯೂ ಉತ್ತಮ ಬೆಲೆ ದೊರೆಯುತ್ತಿಲ್ಲ. ಹೀಗಾಗಿ ನೂತನ ಫುಡ್ಪಾರ್ಕ್ ಈ ನಿಟ್ಟಿನಲ್ಲಿ ರೈತರಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವಿದೆ.
ರೈತರ ಬೆಳೆಯನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಬೇಕಿದೆ. ರೈತರ ಬೆಳ ನಾಶವಾಗದಂತೆ ತಡೆಯಬೇಕು ಮತ್ತು ಇದಕ್ಕಾಗಿ ಉತ್ತಮ ಗುಣಮಟ್ಟದ ಗೋದಾಮುಗಳ ು ಮತ್ತು ಮಾರುಕಟ್ಟೆ ಸೃಷ್ಟಿಸಬೇಕಿದೆ. ಇಂತಹ ಹೆಚ್ಚು ಸಂಸ್ಕರಣಾ ಘಟಕಗಳು ರಾಜ್ಯಾದ್ಯಂತ ಸ್ಥಾಪನೆಯಾಗಬೇಕು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಇಂದು ತುಮಕೂರಿನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


