ಹಾಜರಾತಿ ಇಲ್ಲದಿದ್ದರೂ ಪರೀಕ್ಷೆಗೆ ಏಕೆ ಅವಕಾಶ?
ಹಾಜರಿ ಕೊರತೆ ಇದ್ದರೂ ಸಹ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕೇಳಲು ವಿದ್ಯಾರ್ಥಿಗಳಿಗೆ ಯಾವ ನೈತಿಕ ಹಕ್ಕಿದೆ ಎಂದು ಹೈಕೋರ್ಟ್...

ಬೆಂಗಳೂರು: ಹಾಜರಿ ಕೊರತೆ ಇದ್ದರೂ ಸಹ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕೇಳಲು ವಿದ್ಯಾರ್ಥಿಗಳಿಗೆ ಯಾವ ನೈತಿಕ ಹಕ್ಕಿದೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಹಾಜರಿ ಕೊರತೆ ಇದ್ದ ಕಾರಣ ಕೆಂಪಾಪುರ ಬಳಿಯ ಸಿಂಧಿ ಕಾಲೇಜಿನ ವಿದ್ಯಾಥಿಗಳಿಗೆ ದ್ವಿತೀಯ ಪಿಯು ಪರೀಕ್ಷೆ ಬರೆ ಯಲು ಅವಕಾಶ ನೀಡದಿದ್ದನ್ನು ಪ್ರಶ್ನಿಸಿ ಕಾಲೇಜಿನ 14 ವಿದ್ಯಾರ್ಥಿ ಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ಪೀಠ, ಮಾ16ರಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಮಧ್ಯಂತರ ಆದೇಶ ನೀಡಿತ್ತು. ಅಲ್ಲದೇ ಮುಂದಿನ ವಿಚಾರಣೆ ವೇಳೆ ಮಕ್ಕಳ ಹಾಜರು ವಿವರ ಸಲ್ಲಿಸು ವಂತೆ ಕಾಲೇಜಿಗೆ ಸೂಚಿಸಿ, ಫಲಿತಾಂಶ ಅಂತಿಮ ಆದೇಶಕ್ಕೆ ಬದಟಛಿವಾಗಿರಬೇಕು ಎಂದು ಆದೇಶಿಸಿ ವಿಚಾರಣೆ ಮುಂದೂಡಿತ್ತು.
ಬುಧವಾರ ವಿಚಾರಣೆ ವೇಳೆ ಕಾಲೇಜಿನ ಪರ ವಕೀಲರು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಿ ಸರಾಸರಿ ಶೇ.33-45ರಷ್ಟಿದೆ ಎಂದು ಪೀಠದ ಗಮನಕ್ಕೆ ತಂದರು. ಅಸಮಾಧಾನ ವ್ಯಕ್ತಪಡಿಸಿದ ಪೀಠ, ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಎಸ್‍ಎಂಎಸ್ ಮಾಡಿದರೂ ಪೋಷಕರು ಸುಮ್ಮನಿದ್ದಿದ್ದು ಸರಿಯಲ್ಲ. ಮಕ್ಕಳ ವಿಚಾರದಲ್ಲಿ ಕಟ್ಟು ನಿಟ್ಟು ಪ್ರದರ್ಶನ ಮಾಡಬೇಕಿದ್ದು ಪೋಷಕರ ಕರ್ತವ್ಯ. ಶಿಕ್ಷಣದ ವಿಚಾರದಲ್ಲಿ ಶಿಸ್ತು ಪಾಲನೆ ಅತ್ಯಗತ್ಯ. ವಿದ್ಯಾರ್ಥಿಗಳು ಕಾಲೇಜಿಗೆ ಏಕೆ ಹಾಜರಾಗಲಿಲ್ಲ ಎಂದು ಪೋಷಕರ ಹಾಗೂ ವಿದ್ಯಾರ್ಥಿಗಳ ಧೋರಣೆಯನ್ನು ಪೀಠ ಖಾರವಾಗಿ ಖಂಡಿಸಿ ವಿಚಾರಣೆ ಏ.15ಕ್ಕೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


