ಅಂಬಿ ಔತಣದಲ್ಲಿ ಸಿಎಂ ಸಿದ್ದು ಭೋಜನ!
ವಸತಿ ಸಚಿವ ಅಂಬರೀಷ್ ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಮೂಲಕ ರಾಜಕೀಯ ಉಹಾಪೋಹಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ...

ಬೆಂಗಳೂರು: ವಸತಿಸಚಿವ ಅಂಬರೀಷ್ ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಮೂಲಕ ರಾಜಕೀಯ ಉಹಾಪೋಹಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ, ಸಚಿವರು ಹಾಗೂ ಆಪ್ತ ಸ್ನೇಹಿತರಿಗೆ ಗುರುವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದರು. ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂಬರೀಷ್ ಮಧ್ಯೆ ಶೀತಲ ಸಮರ ನಡೆಯುತ್ತಿದೆ ಎನ್ನಲಾಗುತ್ತಿತ್ತು. ಇದಲ್ಲದೇ ಉಭಯ ನಾಯಕರು ಬಹಿರಂಗವಾಗಿಯೇ ಕೆಲ ಹೇಳಿಕೆಗಳನ್ನು ನೀಡಿದ್ದರು.
ಔತಣ ಕೂಟಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಮುಖಂಡರು ಹೇಳುತ್ತಿದ್ದರೂ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಕುತೂಹಲ ಹುಟ್ಟಿಸಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


