ಜಿಲ್ಲಾ ಸುದ್ದಿ

ದಿಲ್ಲಿಯಲ್ಲಿ ಸಂಪುಟ ಪುನಾರಚನೆ ಚರ್ಚೆ ಇಲ್ಲವೇ ಇಲ್ಲ: ಸಿಎಂ ಸಿದ್ದು

ಸಚಿವ ಸಂಪುಟ ಪುನಾರಚನೆ ಸತ್ಯ. ಆದರೆ, ಶನಿವಾರ ದೆಹಲಿಗೆ ಹೋಗುತ್ತಿರುವುದು ಈ ಕಾರಣಕ್ಕಲ್ಲ. ಈ ಸಂಬಂಧ ಅಲ್ಲಿ ಯಾವುದೇ ಚರ್ಚೆಗಳೂ ನಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ...

ದಿಲ್ಲಿಯಲ್ಲಿ ಸಂಪುಟ ಪುನಾರಚನೆ ಚರ್ಚೆ ಇಲ್ಲವೇ ಇಲ್ಲ: ಸಿಎಂ ಸಿದ್ದು
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಸಚಿವ ಸಂಪುಟ ಪುನಾರಚನೆ ಸತ್ಯ. ಆದರೆ, ಶನಿವಾರ ದೆಹಲಿಗೆ ಹೋಗುತ್ತಿರುವುದು ಈ ಕಾರಣಕ್ಕಲ್ಲ. ಈ ಸಂಬಂಧ ಅಲ್ಲಿ ಯಾವುದೇ ಚರ್ಚೆಗಳೂ ನಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ  ಮಾತನಾಡಿ ಅವರು, `ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ಅವರು ದೆಹಲಿಯಲ್ಲಿ ಶನಿವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ಸಭೆ ಕರೆದಿೀದ್ದಾರೆ. ಈ ಸಭೆಗೆ ಆಹ್ವಾನಿತನಾಗಿ ಹೋಗುತ್ತಿದ್ದೇನೆಯೇ ವಿನಾ ಯಾವುದೇ ರಾಜಕೀಯ ಚಟುವಟಿಕೆಗೆ ಅಲ್ಲ ಎಂದು ಹೇಳಿದರು.

ಬೆಂಗಳೂರಿನ ಹಾಸ್ಟೆಲ್‍ನಲ್ಲಿ ಗುಂಡಿನ ದಾಳಿಗೆ ಮೃತಪಟ್ಟ ವಿದ್ಯಾರ್ಥಿನಿ ಗೌತಮಿ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು. ಈ ಪ್ರಕರಣದಲ್ಲಿ ತಮಗೆ ನ್ಯಾಯ ಸಿಗಬೇಕು ಎಂದು ಆಕೆಯ ಪೋಷಕರು ನನ್ನನ್ನು ಭೇಟಿ ಮಾಡಿ ಕೋರಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ನಾನು ಈಗಾಗಲೇ ತನಿಖೆಗೆ ಆದೇಶಿಸಿದ್ದೇನೆ. ನ್ಯಾಯ ಖಂಡಿತ ದೊರಕುತ್ತದೆ. ಅವರು ಯಾವುದೇ ಪರಿಹಾರವನ್ನು ಸರ್ಕಾರದ ವತಿಯಿಂದ ಅಪೇಕ್ಷಿಸಿಲ್ಲ ಎಂದು ತಿಳಿಸಿದ ಸಿಎಂ, ಈ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿರಿಷಾ ಎಂಬ ವಿದ್ಯಾರ್ಥಿನಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.