ಕ್ಯಾಮೆರಾಮನ್ ಆತ್ಮಹತ್ಯೆ
ಧಾರವಾಹಿ ಛಾಯಾಗ್ರಾಹಕ ಕುಮಾರ್(38) ನೇಣು ಬಿಗಿದು ಸ್ನೇಹಿತೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರದ ಸುಬ್ಬಣ್ಣ ಗಾರ್ಡನ್ ನಲ್ಲಿ ನಡೆದಿದೆ..

ಬೆಂಗಳೂರು: ಧಾರವಾಹಿ ಛಾಯಾಗ್ರಾಹಕ ಕುಮಾರ್(38) ನೇಣು ಬಿಗಿದು ಸ್ನೇಹಿತೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರದ ಸುಬ್ಬಣ್ಣ ಗಾರ್ಡನ್ ನಲ್ಲಿ ನಡೆದಿದೆ.
ಇಲ್ಲಿನ ಪೈಪ್‍ಲೈನ್ ರಸ್ತೆ ನಿವಾಸಿಯಾಗಿದ್ದ ಕುಮಾರ್, ಕೆಲವು ವರ್ಷಗಳ ಹಿಂದೆ ಕನ್ನಡ ಧಾರವಾಹಿಗಳನ್ನು ನಿರ್ದೇಶಿಸಿದ್ದರು. 9 ವರ್ಷಗಳ ಹಿಂದೆ ಇವರಿಗೆ ವಿವಾಹವಾಗಿದ್ದು, ಸಾಂಸಾರಿಕ ಜೀವನದಲ್ಲಿ ಸಮಸ್ಯೆ ಉಂಟಾಗಿದ್ದರಿಂದ ಪತ್ನಿ ತೊರೆದು ಸ್ನೇಹಿತೆ ಲಲಿತಾ ಅವರ ಮನೆಯಲ್ಲಿ ಕೆಲವು ದಿನಗಳಿಂದ ವಾಸವಿದ್ದರು. ಲಲಿತಾ ಅವರು ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಧಾರವಾಹಿಗಳೊಂದಿಗೆ ಸಂಪರ್ಕ ಹೊಂದಿದ್ದರಿಂದ ಕುಮಾರ್ ಹಾಗೂ ಲಲಿತಾ ಹಲವು ವರ್ಷಗಳಿಂದ ಪರಿಚಿತರಾಗಿದ್ದರು. ಕೆಲವು ದಿನಗಳ ಹಿಂದಷ್ಟೇ ಪತ್ನಿಯಿಂದ ವಿಚ್ಛೇಧನ ನೋಟಿಸ್ ಬಂದಿತ್ತು ಎನ್ನಲಾಗಿದೆ.
ಇದರಿಂದ ಬೇಸರಗೊಂಡಿದ್ದ ಕುಮಾರ್, ಶುಕ್ರವಾರ ಬೆಳಗ್ಗೆ ತನಗೆ ಜೀವನದಲ್ಲಿ ಬೇಸರವಾಗಿದೆ ಎಂದು ಲಲಿತಾ ಅವರ ಬಳಿ ಹೇಳಿಕೊಂಡಿದ್ದರು. ಬೆಳಗ್ಗಯೇ ಲಲಿತಾ ಅವರಿಗೆ ಕಾಫಿ ಮಾಡಲು ಹೇಳಿದ್ದರು. ಅವರು ಕಾಫಿ ಮಾಡಲು ತೆರಳಿದ್ದಾಗ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


