ಜಿಲ್ಲಾ ಸುದ್ದಿ

ರಣವಿಕ್ರಮ ಪ್ರದರ್ಶನದ ವೇಳೆ ರನ್ನ ಟೀಸರ್ ಪ್ರದರ್ಶನ: ಪ್ರೇಕ್ಷಕರಿಂದ ದಾಂಧಲೆ

ಪುನೀತ್ ರಾಜ್ ಕುಮಾರ್ ಅಭಿನಯದ ರಣವಿಕ್ರಮ ಚಿತ್ರ ಪ್ರದರ್ಶನದ ವೇಳೆ ರನ್ನ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದನ್ನು ಆಕ್ಷೇಪಿಸಿ, ಪ್ರೇಕ್ಷಕರು ಸಂತೋಷ್ ಚಿತ್ರಮಂದಿರದಲ್ಲಿ ದಾಂಧಲೆ ಎಬ್ಬಿಸಿದ್ದಾರೆ...

ರಣವಿಕ್ರಮ ಪ್ರದರ್ಶನದ ವೇಳೆ ರನ್ನ ಟೀಸರ್ ಪ್ರದರ್ಶನ: ಪ್ರೇಕ್ಷಕರಿಂದ ದಾಂಧಲೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ರಣವಿಕ್ರಮ ಚಿತ್ರ ಪ್ರದರ್ಶನದ ವೇಳೆ ರನ್ನ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದನ್ನು ಆಕ್ಷೇಪಿಸಿ, ಪ್ರೇಕ್ಷಕರು ಸಂತೋಷ್ ಚಿತ್ರಮಂದಿರದಲ್ಲಿ ದಾಂಧಲೆ ಎಬ್ಬಿಸಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಕೆಂಪೇಗೌಡ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ರಣವಿಕ್ರಮ ಚಿತ್ರ ಪ್ರದರ್ಶನ ಕಾಣುತ್ತಿದ್ದು, ಇಂಟರ್ ವಲ್ ವೇಳೆ ನಟ ಸುದೀಪ್ ಅಭಿನಯದ ರನ್ನ ಚಿತ್ರದ ಟೀಸರ್ ಪ್ರದರ್ಶನ ಮಾಡಿದ್ದರಿಂದ ಪ್ರೇಕ್ಷಕರು ಚಿತ್ರಮಂದಿರದಲ್ಲಿ ಗಲಾಟೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಸಿನಿಮಾದ ಇಂಟರ್ ವಲ್ ನಲ್ಲಿ ರನ್ನ ಚಿತ್ರದ ಟೀಸರ್ ಪ್ರದರ್ಶನ ಮಾಡುತ್ತಿದ್ದಾಗ, ರೊಚ್ಚಿಗೆದ್ದ ಅಭಿಮಾನಿಗಳು ಪ್ರೊಜೆಕ್ಟರ್ ನತ್ತ ಬಾಟಲಿ ತೂರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಕಿಟಕಿ ಗಾಜುಗಳೆಲ್ಲಾ ಪುಡಿ, ಪುಡಿಯಾದವು.

ಕೂಡಲೇ ಎಚ್ಚೆತ್ತ ಥಿಯೇಟರ್ ಸಿಬ್ಬಂದಿಗಳು ರನ್ನ ಸಿನಿಮಾದ ಟೀಸರ್ ಪ್ರದರ್ಶನ ಸ್ಥಗಿತಗೊಳಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವಾತಾವರಣ ತಿಳಿಯಾದ ನಂತರ ಚಿತ್ರಮಂದಿರದ ಸಿಬ್ಬಂದಿಗಳು ಮತ್ತೆ ರಣವಿಕ್ರಮ ಸಿನಿಮಾ ಪ್ರದರ್ಶನ ಮುಂದುವರಿಸಿದ್ದಾರೆ.

ರಣವಿಕ್ರಮ ಚಿತ್ರವನ್ನು ಜಯಣ್ಣ ಕಂಬೈನ್ಸ್ ನಡಿ ಜಯಣ್ಣ ಮತ್ತು ಭೋಗೇಂದ್ರ ಕೂಡಿ ನಿರ್ಮಿಸಿದ್ದು, ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್, ಅದಾಶರ್ಮಾ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸಿರುವುದು ಪವನ್ ಒಡೆಯರ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.