ನಾಳೆಯಿಂದ ಜಾತಿಗಣತಿ
ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ `ಜಾತಿ ಗಣತಿ'ಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲಿ ಸಜ್ಜಾಗಿದ್ದು, ಏ.11ರಿಂದ 30ರ...

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ `ಜಾತಿ ಗಣತಿ'ಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲಿ ಸಜ್ಜಾಗಿದ್ದು, ಏ.11ರಿಂದ 30ರವರೆಗೆ ಸಮೀಕ್ಷೆ ನಡೆಯಲಿದೆ. ಗಣತಿ ಪ್ರಚಾರಕ್ಕಾಗಿ ಸಂಗೀತ ನಿರ್ದೇಶಕ ಹಂಸಲೇಖ ನೇತೃತ್ವದಲ್ಲಿ ಹಾಡನ್ನು ಸಿದ್ಧಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಇತರೆ ಪ್ರತಿನಿಧಿಗಳು ಮತ್ತು ಸಮುದಾಯದ ಮುಖಂಡರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಚಾಲನೆ ನೀಡಲಿದ್ದಾರೆ. ಪರಿಶಿಷ್ಟ ಜಾತಿ- ಪಂಗಡಗಳ ಪರಿಷ್ಕೃತ ಸಂಕೇತ ಸಂಖ್ಯೆ ಪಟ್ಟಿಯನ್ನು ಗಣತಿದಾರರಿಗೆ ಈಗಾಗಲೇ ಕಳುಹಿಸಲಾಗಿದೆ. ಸಮೀಕ್ಷೆಗೆ ಶಿಕ್ಷಕರನ್ನು ಬಳಸಿ ಕೊಳ್ಳಲು ಆದೇಶ ಹೊರಡಿಸಲಾಗಿದೆ.
ಗಣತಿದಾ ರರಿಗೆ ರು. 6500 ಹಾಗೂ ಮೇಲ್ವಿಚಾರಕರಿಗೆ ರು. 5500 ಗೌರವಧನ ನೀಡಲಾಗುತ್ತದೆ. ಶಾಲೆ ಗಳಲ್ಲಿ ರಜೆ ಇರುವ ಸಮಯದಲ್ಲಿ ಗಣತಿದಾರರು
ಸಮೀಕ್ಷೆ ಮಾಡುವುದರಿಂದ ಅವರಿಗೆ ಗಳಿಕೆ ರಜೆ ಸೌಲಭ್ಯದ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಂದು ತಾಲೂಕುಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು
ಸಮೀಕ್ಷೆಯ ಮೇಲುಸ್ತುವಾರಿ ಮಾಡಲು ನೊಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಬಿಬಿಎಂಪಿ ವಲಯದ ಜಂಟಿ ಆಯುಕ್ತರಿಗೆ ತಿಳಿಸಲಾಗಿದೆ.
ಪ್ರಧಾನ ಸಮೀಕ್ಷಾಧಿಕಾರಿ ಹಾಗೂ ಅಪರ ಸಮೀಕ್ಷಾಧಿಕಾರಿಗಳಿಗೆ ಸಮೀಕ್ಷೆಯ ಕುರಿತು ಮಾಡಿಕೊಂಡಿರುವ ಪೂರ್ವಸಿದ್ಧತೆಗಳ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲಿಸಲಾಗಿದೆ. ಈಗಾಗಲೇ ಗಣತಿದಾರರಿಗೆ ಎರಡು ಸುತ್ತಿನ ತರಬೇತಿ ಸಹ ನೀಡಲಾಗಿದೆ. ಗಣತಿದಾರರಿಗೆ ನೀಡಬೇಕಾದ ಲೇಖನ ಸಾಮಗ್ರಿಗಳನ್ನು ಹಾಗೂ ಸಮೀಕ್ಷಾ ನಮೂನೆಗಳನ್ನು ಎಲ್ಲಾ ಜಿಲ್ಲೆಗಳಿಗೆ ಕಳುಹಿಸಲಾಗಿದೆ.
ಜಾತ್ಯತೀತ ರಾಷ್ಟ್ರ ಎಂದು ಖ್ಯಾತಿ ಪಡೆದಿರುವ ಈ ಭಾರತದಲ್ಲಿ ಇತ್ತೀಚಿಗೆ ಜಾತಿ ಉಪ ಜಾತಿಗಳು ಹೆಚ್ಚಾಗುತ್ತಿರುವುದು ದುರಾದೃಷ್ಟದ ಸಂಗತಿ.
- ನ್ಯಾ.ರಾಮಮೋಹನ ರೆಡ್ಡಿ, ಹೈಕೋರ್ಟ್ ನ್ಯಾಯಮೂರ್ತಿ.
ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಸಮಾಜದ ಎಲ್ಲಾ ವರ್ಗಗಳಿಗೆ ನೀಡುವುದು ಸರ್ಕಾರದ ಕರ್ತವ್ಯ. ಹೀಗಾಗಿ ರಾಜ್ಯದಲ್ಲಿ ವೈಜ್ಞಾನಿಕವಾಗಿ ಮೀಸಲು ಹಂಚಿಕೆಯನ್ನು ಕೈಗೊಳ್ಳುವ ಸಲುವಾಗಿ ಏಪ್ರಿಲ್ 11ರಿಂದ 30ರ ಅವಧಿ ಯಲ್ಲಿ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದೆ. ತಪ್ಪು ಮಾಹಿತಿ ನೀಡುವುದು ಅಥವಾ ತಪ್ಪು ಮಾಹಿತಿ ದಾಖಲಿಸಿದ್ದು, ಖಚಿತವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ.
- ಎಚ್.ಆಂಜನೇಯ
ಸಮಾಜ ಕಲ್ಯಾಣ ಖಾತೆ ಸಚಿವ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


