ಗೋಮಾಂಸ ಸೇವನೆ: ಸಾಹಿತಿಗಳ ವಿರುದ್ಧ ಎಫ್ ಐಆರ್
ಆಹಾರ ಸಂಸ್ಕೃತಿ ಉಳಿಸಿ' ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಟೌನ್‍ಹಾಲ್ ಮುಂಭಾಗ...

ಬೆಂಗಳೂರು: `ಆಹಾರ ಸಂಸ್ಕೃತಿ ಉಳಿಸಿ' ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಟೌನ್‍ಹಾಲ್ ಮುಂಭಾಗ ಗೋಮಾಂಸ ಸೇವಿಸಿದ ಸಾಹಿತಿಗಳು ಹಾಗೂ ನಾನಾ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕೋರ್ಟ್ ನೀಡಿದ ಸೂಚನೆಯನ್ನು ಉಲ್ಲಂಘಿಸಿ, ಗೋಮಾಂಸ ಸೇವಿಸುವ ಮೂಲಕ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಹಿರಿಯ ಸಾಹಿತಿಗಳಾದ ಗಿರೀಶ್ ಕಾರ್ನಾಡ್, ಪ್ರೊ. ಮರುಳಸಿದ್ದಪ್ಪ, ದಲಿತ ಸಂಘಟನೆ ಮುಖಂಡರಾದ ಮಾವಳ್ಳಿ ಶಂಕರ್, ಲಕ್ಷ್ಮೀನಾರಾಯಣ ನಾಗವಾರ ಸೇರಿದಂತೆ 7 ಜನರ ಮೇಲೆ ಪೊಲೀಸರು ಎಫ್ಐಆರ್ ದಾಖಲಾಗಿದೆ.
ಗೋಮಾಂಸ ಸೇವಿಸಿ ಪ್ರತಿಭಟನೆ ನಡೆಸುವುದನ್ನು ಪ್ರಶ್ನಿಸಿ ಶಿವಕುಮಾರ್ ಎಂಬುವವರು ನ್ಯಾಯಾಲಯದಲ್ಲಿ ಖಾಸಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯಲ್ಲಿ ನ್ಯಾಯಾಲಯವು ವಾಸ್ತವಗಳನ್ನು ದಾಖಲಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು, ಪ್ರತಿಭಟನೆ ನಡೆಸಿದವರ ವಿರುಜ್ಝ ಎಫ್ಐ ಆರ್ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವರದಿ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


