ವರದಕ್ಷಿಣೆ ಕಿರುಕುಳ: ಡಿಸ್ಚಾರ್ಜ್ ಆದ ತಕ್ಷಣ ವೇಣುಗೋಪಾಲ್ ಆರೆಸ್ಟ್
ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡಿ, ಗೃಹಬಂಧನದಲ್ಲಿರಿಸಿದ್ದ ಪತ್ನಿ ಪೀಡಕ ಮೂಡಲಪಾಳ್ಯದ ವೇಣುಗೋಪಾಲ್‍ನನ್ನು ಆಸ್ಪತ್ರೆಯಿಂದ....

ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡಿ, ಗೃಹಬಂಧನದಲ್ಲಿರಿಸಿದ್ದ ಪತ್ನಿ ಪೀಡಕ ಮೂಡಲಪಾಳ್ಯದ ವೇಣುಗೋಪಾಲ್‍ನನ್ನು ಆಸ್ಪತ್ರೆಯಿಂದ ಬಿಡುಗಡೆಯಾದ ತಕ್ಷಣವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪತ್ನಿ ಮಂಡ್ಯ ಮೂಲದ ಶೋಭಾಳಿಗೆ ತೀವ್ರ ಚಿತ್ರಹಿಂಸೆ ನೀಡಿದ್ದ ವೇಣುಗೋಪಾಲ್, ಸಂಬಂಧಿಕರಿಂದ ಒದೆ ತಿಂದ ಹಿನ್ನೆಲೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಿರುಕುಳಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದ ಶೋಭಾಳನ್ನು ಆಕೆಯ ಪೋಷಕರು ನಗರದ ಖಾಸಗಿ ಆಸ್ಪತ್ರೆಗ ಸೇರಿಸಿದ್ದ ಬೆನ್ನಲೇ ವೇಣು ಗೋಪಾಲ್ ಕೂಡ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿರಲಿಲ್ಲ.
ಸೋಮವಾರ ಕೂಡ ಆತ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ. ಇಂದು ಬೆಳಗ್ಗೆ ವೇಣುಗೋಪಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆಯೇ ವಿಜಯನಗರ ಪೊಲೀಸರು ಆತನನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


