ಸೋಲ್ತೀವಿ ಅಂಥ ವಿಭಜಿಸ್ತಿಲ್ಲ
ಕಾಂಗ್ರೆಸ್ ಚುನಾವಣೆಯಲ್ಲಿ ಸೋಲುತ್ತದೆ ಅಂತ ಬಿಬಿಎಂಪಿ ವಿಭಜನೆ ಮಾಡಲು ಹೊರಟಿಲ್ಲ. 2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಪ್ರಣಾಳಿಕೆ...

ಹಾಸನ: ಕಾಂಗ್ರೆಸ್ ಚುನಾವಣೆಯಲ್ಲಿ ಸೋಲುತ್ತದೆ ಅಂತ ಬಿಬಿಎಂಪಿ ವಿಭಜನೆ ಮಾಡಲು ಹೊರಟಿಲ್ಲ. 2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ವಿಭಜನೆ ಮಾಡ ಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅರಕಲಗೂಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಗೆ 2007ರಲ್ಲಿ ಬೆಂಗಳೂರು ಸುತ್ತಮುತ್ತಲು ಇರುವ 110 ಹಳ್ಳಿ ಮತ್ತು 7 ಪುರಸಭೆ ಸೇರ್ಪಡೆ ಮಾಡಲಾಗಿತ್ತು. ಇದರಿಂದ ಬಿಬಿಎಂಪಿಯ ಕಾರ್ಯ ವ್ಯಾಪ್ತಿ ದೊಡ್ಡದಾಗಿದ್ದರಿಂದ ವಿಭಜನೆ ಮಾಡಲಾಗುತ್ತಿದೆ ಹೊರತು ಬೇರೆ ಯಾವ ಉದ್ದೇಶ ಇಲ್ಲ ಎಂದರು.
ವಾಪಸ್ ಕಳುಹಿಸಿಲ್ಲ
ಚಿಕ್ಕಮಗಳೂರು: ಬಿಬಿಎಂಪಿ ವಿಭಜನೆಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಸ್ಪಷ್ಟೀಕರಣ ಕೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿದ್ದಾಗ ಬೆಂಗಳೂರು ನಗರಕ್ಕೆ ಉತ್ತಮ ಆಡಳಿತ ನೀಡಲು ಸಾಧ್ಯವಾಗಿರಲಿಲ್ಲ. ಕಸ ಎತ್ತಲು ಆಗಲಿಲ್ಲ. ರಸ್ತೆ, ಚರಂಡಿಗಳು ನಿರ್ಮಾಣ ಮಾಡಿಲ್ಲ. ಇಲ್ಲಿನ ಜನರಿಗೆ ಮೂಲ ಸೌಲಭ್ಯ ನೀಡುವ ಜತೆಗೆ ಉತ್ತಮ ಆಡಳಿತ ನೀಡಲು ಬೆಂಗಳೂರು ಮಹಾನಗರವನ್ನು ಮೂರು ವಿಭಾಗಗಳಾಗಿ ವಿಂಗಡಿಸುವುದು ಸೂಕ್ತ ಎಂದರು.
ನಮ್ಮನ್ನು ಏಕೆ ಬೆದರಿಸುತ್ತೀರಿ?
ಬೆಂಗಳೂರು: ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಬೇಕೆಂದು ಕೋರಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ವಿಭಾಗೀಯ ಪೀಠ, ಚುನಾವಣಾ ಆಯೋಗದ ವಿರುದ್ಧ ಗರಂ ಆಯಿತು.
ಮುಖ್ಯ ನ್ಯಾ.ಡಿ.ಎಚ್.ವಘೇಲ, ನ್ಯಾ.ರಾಮಮೋಹನ ರೆಡ್ಡಿ ವಿಭಾಗೀಯ ಪೀಠ, ಪ್ರಕರಣದ ವಿಚಾರಣೆ ಸೋಮವಾರ ಆರಂಬಿsಸಿದಾಗ ರಾಜ್ಯ ಚುನಾವಣೆ ಆಯೋಗ ಪರ ವಕೀಲ ಕೆ.ಎನ್. ಫಣೀಂದ್ರ, ಏಕಸದಸ್ಯ ಪೀಠದ ಆದೇಶದ ಪ್ರಕಾರ ಏ.13ರ ಒಳಗಾಗಿ ಸರ್ಕಾರ ಚುನಾವಣಾ ಮೀಸಲು ಪಟ್ಟಿ ಪ್ರಕಟಿಸಬೇಕಿತ್ತು. ಈ ಮೀಸಲು ಪಟ್ಟಿ ಆಧರಿಸಿ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಬೇಕಿತ್ತು. ಸರ್ಕಾರ ಮೀಸಲು ಪಟ್ಟಿ ಪ್ರಕಟಿಸದಿದ್ದಲ್ಲಿ, ಹಾಲಿ ಮೀಸಲು ಪಟ್ಟಿ ಆಧರಿಸಿ ಚುನಾವಣೆ ನಡೆಸಬೇಕು.
ಪಾಲಿಕೆಯಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಾರ್ಡ್‍ಗಳ ವಿಂಗಡಣೆ ಮತ್ತು ಪರಿಷ್ಕೃತ ಮತದಾರರ ಪಟ್ಟಿ ಆಧರಿಸಿಯೇ ಈ ಚುನಾವಣೆ ನಡೆಸಬೇಕು ಎಂದು ಆದೇಶಿಸಿದೆ. ಆದ್ದರಿಂದ ಏ.13 ರೊಳಗೆ ಮೀಸಲು ಪಟ್ಟಿ ಪ್ರಕಟಿಸಬೇಕೆಂದು ಏಕಸದಸ್ಯ ಪೀಠ ಆದೇಶಿಸಿದ ಕಾರಣ ಮುಂದಿನ ವಿಚಾರಣೆ ವೇಳೆ ಇದಕ್ಕೆ ಸಂಬಂಧಿಸಿದಂತೆ ಪೀಠ ಆಶ್ಚರ್ಯ ವ್ಯಕ್ತಪಡಿಸಬಾರದು ಎಂದು ಪೀಠದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಚುನಾವಣಾ ಆಯೋಗ ಇದಕ್ಕೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕು. ಇದರಿಂದ ಹೈಕೋರ್ಟ್ ಏನು ಮಾಡಲು ಸಾಧ್ಯ? ನೀವು ಏಕೆ ನಮ್ಮನ್ನು ಬೆದರಿಸುತ್ತೀರಿ ಎಂದು ಪೀಠ ಆಯೋಗದ ಪರ ವಕೀಲರನ್ನು ಪ್ರಶ್ನಿಸಿತು. ಪಾಲಿಕೆ ಚುನಾವಣೆ ಪ್ರಕ್ರಿಯೆ ಮೇ 30ರೊಳಗಾಗಿ ಪೂರ್ಣಗೊಳಿಸುವಂತೆ ಏಕಸದಸ್ಯ ಪೀಠ ಮಾ.30ರಂದು ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ದಾಖಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


