ಬೈಕ್ ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡಿದ ಸಿಎಂ ಸಿದ್ಧರಾಮಯ್ಯ
ಮಹಾನಗರಗಳಲ್ಲಿ ಅಪಘಾತಕ್ಕೀಡಾದವರನ್ನು ಸಕಾಲಕ್ಕೆ ತಲುಪಿ ತುರ್ತು ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ `ಬೈಕ್ ಆ್ಯಂಬುಲೆನ್ಸ್ 24x7' ಸೇವೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ...

ಬೆಂಗಳೂರು: ಏಷ್ಯಾದಲ್ಲಿಯೇ ಮೊಟ್ಟಮೊದಲ ಬೈಕ್ ಆ್ಯಂಬುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ.
ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೈಕ್ ಆ್ಯಂಬುಲೆನ್ಸ್ 24x7 ಸೇವೆಗೆ ಚಾಲನೆ ನೀಡಿದ್ದಾರೆ.
ಅಪಘಾತಕ್ಕೀಡಾದವರನ್ನು ಸಕಾಲಕ್ಕೆ ತಲುಪಿ ತುರ್ತು ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯ ಸರ್ಕಾರ `ಬೈಕ್ ಆ್ಯಂಬುಲೆನ್ಸ್ 24x7' ಸೇವೆ ಜಾರಿಗೆ ತರುತ್ತಿದ್ದು, ಏಷ್ಯಾದಲ್ಲಿಯೇ ಮೊಟ್ಟಮೊದಲ ಬೈಕ್ ಆ್ಯಂಬುಲೆನ್ಸ್ ಇದಾಗಿದೆ.
ರು.175 ಲಕ್ಷ ವೆಚ್ಚದಲ್ಲಿ 30 ಬೈಕ್ ಆ್ಯಂಬುಲೆನ್ಸ್ ಸಿದ್ಧವಾಗಿದ್ದು, 21 ಆ್ಯಂಬುಲೆನ್ಸ್ ಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲಿವೆ. 108 ಆರೋಗ್ಯ ಕವಚ ಅಡಿಯಲ್ಲೇ ಈ ಸೇವೆಯನ್ನೂ ಸೇರಿಸಲಾಗಿದೆ. ಸಾರ್ವಜನಿಕರು 108 ಸಂಖ್ಯೆಗೆ ಕರೆ ಮಾಡಿದ ನಂತರ ವಾಹನ ದಟ್ಟಣೆ ಹೆಚ್ಚಿರುವ ಹಾಗೂ ನಾಲ್ಕು ಚಕ್ರದ ಆ್ಯಂಬುಲೆನ್ಸ್ ತಲುಪಲು ಸಾಧ್ಯವಾಗದ ಸ್ಥಳಗಳಿಗೆ ಬೈಕ್ ಕಳುಹಿಸಲಾಗುತ್ತದೆ.
ಪ್ಲಾಟಿನಂ ಮಿನಿಟ್ ಯೋಜನೆ ಎಂಬ ಹೆಸರಿನಲ್ಲಿ ಈ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾರಿಗೆ ತರುತ್ತಿದ್ದು, ಬೈಕ್ ಆ್ಯಂಬುಲೆನ್ಸ್ ಸೇವೆಗಾಗಿ ಆವೆಂಜರ್ ಬೈಕ್ ಬಳಕೆಯಾಗುತ್ತಿದೆ. ಈ ಬೈಕ್ ನ ಬೆಲೆ 2 ಲಕ್ಷ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


