ಜಿಲ್ಲಾ ಸುದ್ದಿ

ವಾಯುವಿಹಾರಕ್ಕೆ ಹೋದವರ ಹಿಂದಿದ್ದ ಜವರಾಯ

ವಾಯುವಿಹಾರಕ್ಕೆ ತೆರಳಿದ್ದ ಇಬ್ಬರ ಮೇಲೆ ಕೆಎಸ್ಆರ್ ಟಿಸಿ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶುಕ್ರವಾರ ನಡೆದಿದೆ...

ವಾಯುವಿಹಾರಕ್ಕೆ ಹೋದವರ ಹಿಂದಿದ್ದ ಜವರಾಯ
ಸಾಂದರ್ಭಿಕ ಚಿತ್ರ
Published On :

ಮೈಸೂರು: ವಾಯುವಿಹಾರಕ್ಕೆ ತೆರಳಿದ್ದ ಇಬ್ಬರ ಮೇಲೆ ಕೆಎಸ್ಆರ್ ಟಿಸಿ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶುಕ್ರವಾರ ನಡೆದಿದೆ.

ಶಿವಕುಮಾರ್ (28) ಹಾಗೂ ರಂಗಯ್ಯ (32) ಎಂಬುವರು ವಾಯುವಿಹಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ನಂಜನಗೂಡಿನಿಂದ ಸರಗೂರಿಗೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಇದ್ದಕ್ಕಿದ್ದಂತೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಂತರ ಬಸ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ವಿರೋಧಿಸಿ ಮೃತರ ಕುಂಟುಬಸ್ಥರು ಹಾಗೂ ಸ್ಥಳೀಯರು ಮೃತದೇಹಗಳನ್ನು ರಸ್ತೆಯಲ್ಲಿರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.