ಜಿಲ್ಲಾ ಸುದ್ದಿ

ಪುತ್ರಿ ಮೇಲೆ ಮೈದುನನಿಂದ ಅತ್ಯಾಚಾರ: ನಿವೃತ್ತ ಐಎಎಸ್ ಅಧಿಕಾರಿಯಿಂದ ದೂರು

ತಮ್ಮ ಮಗಳ ಮೇಲೆ ಆಕೆಯ ಪತಿಯ ಸಹೋದರನೆ ಅತ್ಯಾಚಾರ ನಡೆಸಿದ್ದಾನೆ ಎಂದು ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರು ಪೂರ್ವ ವಲಯ ಡಿಸಿಪಿ ಸತೀಶ್‌...

ಪುತ್ರಿ ಮೇಲೆ ಮೈದುನನಿಂದ ಅತ್ಯಾಚಾರ: ನಿವೃತ್ತ ಐಎಎಸ್ ಅಧಿಕಾರಿಯಿಂದ ದೂರು
ಅತ್ಯಾಚಾರ
Published On :

ಬೆಂಗಳೂರು: ತಮ್ಮ ಮಗಳ ಮೇಲೆ ಆಕೆಯ ಪತಿಯ ಸಹೋದರನೆ ಅತ್ಯಾಚಾರ ನಡೆಸಿದ್ದಾನೆ ಎಂದು ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರು ಪೂರ್ವ ವಲಯ ಡಿಸಿಪಿ ಸತೀಶ್‌ ಅವರಿಗೆ ದೂರು ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಮೈಸೂರಿನ ಪ್ರಸಿದ್ದ ಉದ್ಯಮಿಯ ವಿರುದ್ದ ನಿವೃತ್ತ ಐಎಎಸ್‌ ಅಧಿಕಾರಿ ಅತ್ಯಾಚಾರ ಆರೋಪ ಮಾಡಿದ್ದಾರೆ. ಅಲ್ಲದೆ ತಮ್ಮ ಮಗಳಿಗೆ ಆಕೆಯ ಪತಿ, ಮಾವ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆ ಮೈಸೂರಿನಲ್ಲಿ ನಡೆದ ಹಿನ್ನಲೆಯಲ್ಲಿ ಪ್ರಕರಣವನ್ನು ಡಿಸಿಪಿ ಸತೀಶ್‌ ಅವರು ಮೈಸೂರಿಗೆ ವರ್ಗಾವಣೆ ಮಾಡಿದ್ದಾರೆ. ಮೈಸೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.