ಕಾಂಗ್ರೆಸ್‍ಗೆ ಅನುಕೂಲಕರ ಮೀಸಲು ಪಟ್ಟಿ: ಎಚ್.ಡಿ.ದೇವೇಗೌಡ
ಬಿಬಿಎಂಪಿ ತ್ರಿಭಜನೆಯಿಂದ ಮೂವರು ಮೇಯರ್, ಕಚೇರಿಗಳು ಎಲ್ಲ ವಿಭಾಗವಾಗಿ ಆಡಳಿತಾತ್ಮಕ ವೆಚ್ಚ ಹೆಚ್ಚಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ದಾರೆ...

ಹಾಸನ: ಬಿಬಿಎಂಪಿ ತ್ರಿಭಜನೆಯಿಂದ ಮೂವರು ಮೇಯರ್, ಕಚೇರಿಗಳು ಎಲ್ಲ ವಿಭಾಗವಾಗಿ ಆಡಳಿತಾತ್ಮಕ ವೆಚ್ಚ ಹೆಚ್ಚಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ಹೇಳಿದೆ. ವಿಭಾಗೀಯ ಪೀಠಕ್ಕೂ ಸರ್ಕಾರದ ವಾದ ಕೇಳಲಿಕ್ಕೆ ಇಷ್ಟ ಇಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿಭಜನೆಯ ನೆಪವನ್ನು ಹೂಡುವುದು ಸರಿಯಲ್ಲ ಎಂದು ಹೇಳಿದರು. ಬಿಬಿಎಂಪಿಯಲ್ಲಿ 14 ಮಂದಿ ಒಕ್ಕಲಿ ಸದಸ್ಯರಿದ್ದಾರೆ. ಆ ಕ್ಷೇತ್ರಗಳಿಗೆ ಸರ್ಕಾರ ತಮಗೆ ಬೇಕಾದ ಸಮಾಜದವರಿಗೆ ಮೀಸಲು ನೀಡಿದ್ದಾರೆ. ಮೀಸಲು ಬದಲಿಸಿ ಒಬ್ಬರೂ ಗೆಲ್ಲದಂತೆ ಮಾಡಿದ್ದಾರೆ.
ಚುನಾವಣಾ ಆಯೋಗ ಎಲ್ಲ ಪ್ರಕ್ರಿಯೆಯನ್ನು ನಡೆಸಿದ ಮೇಲೆ ಈಗ ವಿಭಜನೆಯ ಮಾಡಲು ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ಆಯೋಗ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ಈ ವಿಚಾರ ಕೋರ್ಟ್ ನಲ್ಲಿ ಇದೆ. ಅಲ್ಲದೆ ರಾಜ್ಯಪಾಲರು ಇದನ್ನು ಹೇಗೆ ನಿಭಾಯಿಸುತ್ತಾರೆ ಅನ್ನೋದನ್ನು ನೋಡಿಬೇಕಿದೆ ಎಂದು ಅಭಿಪ್ರಾಯಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


