ಅತಿಕ್ರಮಣಕ್ಕೆ ಕಟಾರಿಯಾ ವರದಿ ಕಾರಣ!
ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳ ಅವ್ಯವಹಾರ ಹಾಗೂ ಆರ್ಥಿಕ ಅಶಿಸ್ತಿನ ಬಗ್ಗೆ ತನಿಖೆ ನಡೆಸಲು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೇತೃತ್ವದ ಏಕಸದಸ್ಯ ಸಮಿತಿಯನ್ನು ಸರ್ಕಾರ ರಚಿಸಲಾಗಿತ್ತು.

ಬೆಂಗಳೂರು: ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳ ಅವ್ಯವಹಾರ ಹಾಗೂ ಆರ್ಥಿಕ ಅಶಿಸ್ತಿನ ಬಗ್ಗೆ ತನಿಖೆ ನಡೆಸಲು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೇತೃತ್ವದ ಏಕಸದಸ್ಯ ಸಮಿತಿಯನ್ನು ಸರ್ಕಾರ ರಚಿಸಲಾಗಿತ್ತು.
ಈ ವರದಿ ಆಧಾರಸಿ ಮಾ.18ರಂದು ಎಲ್ಲ ಕಾರ್ಪೋರೇಟರ್ಗಳಿಗೆ ಸರ್ಕಾರ ನೋಟಿಸ್ ಜಾರಿ ಮಾಡಿ ಬಿಬಿಎಂಪಿಯನ್ನು ಏಕೆ ವಿಸರ್ಜಿಸಬಾರದು ಎಂದು ಕಾರಣ ಕೇಳಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೌನ್ಸಿಲ್ ಸಭೆಯಲ್ಲಿ ಮಾ.30ರಂದು ಬಿಜೆಪಿ ಆಡಳಿತ ಒಂದು ನಿರ್ಣಯ ಕೈಗೊಂಡು, ಸರ್ಕಾರಕ್ಕೆ ಕಾಲಾವಕಾಶ ಕೇಳಲು ನಿರ್ಧರಿಸಿತ್ತು. ಎಷ್ಟು ಕಾಲಾವಕಾಶ ಎಂದು ನಮೂದಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಆರ್ಥಿಕ ಅಶಿಸ್ತು ಹಾಗೂ ಅವ್ಯವಹಾರಗಳು ಹೆಚ್ಚಾಗಿರುವುದರಿಂದ ಬಿಬಿಎಂಪಿಯನ್ನು ವಿಸರ್ಜನೆ ಮಾಡಲು ಸಚಿವ ಸಂಪುಟ ಶುಕ್ರವಾರ ನಿರ್ಧರಿಸಿತ್ತು.
ತ್ರಿಭಜನೆಗೆ ಬಿಡಲ್ಲ
ಯಾದಗಿರಿ: ಯಾವುದೇ ಕಾರಣಕ್ಕೂ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಲು ಬಿಜೆಪಿ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಏ.20ರಂದು ವಿಶೇಷ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಆಗ ನಮ್ಮ ಪಕ್ಷ ವಿರೋಧ ವ್ಯಕ್ತಪಡಿಸುವ ಮೂಲಕ ಸರ್ಕಾರದ
ಕ್ರಮದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರ ಜೊತೆಗೂ ಮಾತನಾಡಿ `ಕಲಾಪದಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕೈಜೋಡಿಸಲು ಮನವಿ ಮಾಡಿದ್ದೇವೆ, ಅದಕ್ಕೆ ಅವರೂ ಸ್ಪಂದಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


