ವಿದ್ಯಾರ್ಥಿಗಳ ಮೇಲೆ ಹಲ್ಲೆ: ಜನಾಂಗೀಯ ನಿಂದನೆ ಪ್ರಕರಣ ದಾಖಲು
ಈಶಾನ್ಯ ಭಾರತೀಯರ ಮೇಲೆ ಜನಾಂಗೀಯ ನಿಂದನೆ, ಹಲ್ಲೆ ಪ್ರಕರಣಗಳು ನಗರದಲ್ಲಿ ಮುಂದುವರೆದಿದ್ದು ಅರುಣಾಚಲ ಪ್ರದೇಶ ಮೂಲದ ಯುವಕ...

ಬೆಂಗಳೂರು: ಈಶಾನ್ಯ ಭಾರತೀಯರ ಮೇಲೆ ಜನಾಂಗೀಯ ನಿಂದನೆ, ಹಲ್ಲೆ ಪ್ರಕರಣಗಳು ನಗರದಲ್ಲಿ ಮುಂದುವರೆದಿದ್ದು ಅರುಣಾಚಲ ಪ್ರದೇಶ ಮೂಲದ ಯುವಕ, ಯುವತಿ ಮೇಲೆ
ಶಾಂತಿನಗರದಲ್ಲಿ ಹಲ್ಲೆ ನಡೆದಿದೆ.
ಬೈಕ್‍ನಲ್ಲಿ ತೆರಳುತ್ತಿದ್ದ ಇವರನ್ನು ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ ಸಮೀಪ ಅಡ್ಡಗಟ್ಟಿದ ನಾಲ್ವರು, ಹಲ್ಲೆ ನಡೆಸಿ, ಜನಾಂಗೀಯವಾಗಿ ನಿಂದಿಸಿದ್ದಾರೆಂದು ಹಲ್ಲೆಗೊಳಗಾದವರು ಟ್ವಿಟರ್‍ನಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರಿಗೆ ದೂರು ನೀಡಿದ್ದಾನೆ. ಈ ಸಂಬಂಧ ಐಪಿಸಿ ಕಲಂ 354 ಅನ್ವಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಗೊಳಗಾದವರ ಹೇಳಿಕೆ ದಾಖಲಿಸಿ ಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಶಾಂತಿನಗರ ಲಾಂಗ್ ಫೋರ್ಡ್ ರಸ್ತೆಯಲ್ಲಿ ನೆಲೆಸಿರುವ ತುಮ್ ಖಾನೆಸಿರಮ್ ಮತ್ತು ಈತನ ಸಂಬಂಧಿ ಯುವತಿ ಹಲ್ಲೆಗೊಳಗಾದವರು. ಇವರು ನಗರದ ಖಾಸಗಿ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಓದುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


