ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರ ರಕ್ಷಣೆ
ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ...

ಬೆಂಗಳೂರು: ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ.
ರಕ್ಷಣೆಗೊಳಗಾಗಿರುವ ಒಬ್ಬ ನಟಿ ತಮಿಳಿನ `ಮುತಲ್ ಮನಾವನ್' ಪ್ರಮುಖ ಪಾತ್ರದಲ್ಲಿ ನಟಿಸಿದ್ದಾಳೆ. ಅಲ್ಲದೇ ಕನ್ನಡ, ತಮಿಳು ಸೇರಿದಂತೆ ಹಲವು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ನಿರ್ವಹಿಸಿದ್ದಾಳೆ. ಮತ್ತೊಬ್ಬ ನಟಿ ರಾಜ್ಯದ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ `ಅಶ್ವಿನಿ ನಕ್ಷತ್ರ' ಮತ್ತು `ಬದುಕು' ಧಾರಾವಾಹಿಗಳಲ್ಲೂ ನಟಿಸಿದ್ದಾರೆ ಎಂದು ಪೊಲೀಸರು
ತಿಳಿಸಿದ್ದಾರೆ.
ಸಿನಿಮಾ ಧಾರಾವಾಹಿಗಳಲ್ಲಿ ಅವಕಾಶಕ್ಕಾಗಿ ಪರದಾಡುವ, ಬಡ ಹಾಗೂ ಮಧ್ಯಮ ವರ್ಗದ ಯುವತಿ ಯರನ್ನು ಲಕ್ಷಾಂತರ ಹಣ ಗಳಿಸಬಹುದೆಂದು ಪುಸಲಾಯಿಸಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ಸವಿತಾ(46), ಪುಷ್ಪಾ(32) ಮತ್ತು ವಿಜಯಾ(45)ರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಬನಶಂಕರಿ 2ನೇ ಹಂತ ಹೊಸಕೆರೆಹಳ್ಳಿ 7ನೇ ಮುಖ್ಯ ರಸ್ತೆಯಲ್ಲಿನ ವಸತಿ ಸಮುಚ್ಛಯದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.
ಒಂದು ಮನೆಯಲ್ಲಿ ಪುಷ್ಪಾ ನೆಲೆಸಿದ್ದು, ಪಕ್ಕದಲ್ಲಿದ್ದ ಮತ್ತೊಂದು ಮನೆಯನ್ನು ಬಾಡಿಗೆ ಪಡೆದು ದಂಧೆಗೆ ಬಳಸುತ್ತಿದ್ದರು. ವೇಶ್ಯಾವಾಟಿಕೆ ದಂಧೆ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ
ಸಿಸಿಬಿ ಮಹಿಳಾ ಮತ್ತು ಮಾದಕದ್ರವ್ಯ ದಳ ಪೊಲೀಸರು ದಾಳಿ ನಡೆಸಿದಾಗ ದಂಧೆ ಬಯಲಾಗಿದೆ. ನಟಿಯರು ಮಾತ್ರವಲ್ಲದೆ, ರಾಜ್ಯದ ಬೇರೆ ಬೇರೆ ಭಾಗಗಳಿಂದ ಯುವತಿಯರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದು ವೇಶ್ಯಾವಾಟಿಕೆಗೆ ದೂಡುತ್ತಿದ್ದ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


