ಜಿಲ್ಲಾ ಸುದ್ದಿ

ನಟಿ ಪೂಜಾ ಗಾಂಧಿಗೆ ಷರತ್ತುಬದ್ಧ ಜಾಮೀನು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾ ಗಾಂಧಿಗೆ ರಾಯಚೂರಿನ ಜೆಎಂಎಫ್ ಸಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ನಟಿ ಪೂಜಾ ಗಾಂಧಿಗೆ ಷರತ್ತುಬದ್ಧ ಜಾಮೀನು
ನಟಿ ಪೂಜಾಗಾಂಧಿ
Published On :

ರಾಯಚೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾ ಗಾಂಧಿಗೆ ರಾಯಚೂರಿನ ಜೆಎಂಎಫ್ ಸಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಪೂಜಾ ಗಾಂಧಿ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಮುಂದೆ ಹಾಜರಾದ ಪೂಜಾ ಗಾಂಧಿ ತಮ್ಮ ವಿರುದ್ಧ ಜಾರಿಯಾಗಿರುವ ವಾರಂಟ್ ಹಿಂಪಡೆಯುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಪೂಜಾಗಾಂಧಿಯನ್ನು ವಿಚಾರಣೆ ಕೊನೆಯವರೆಗೂ ಕಸ್ಟಡಿಗೆ ನೀಡಿತ್ತು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ ಗಾಂಧಿ 500 ರು. ದಂಡ ವಿಧಿಸಿ ಷರತ್ತುಬದ್ಧ ಜಾಮೀನು ನೀಡಿದೆ.

2013ರ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರದಿಂದ ಬಿಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೂಜಾ ಗಾಂಧಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಅವರು ಸತತ ಮೂರು ಬಾರಿ ಗೈರು ಹಾಜರಾದ ಕಾರಣ ಈ ವಾರಂಟ್‌ ಜಾರಿ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.