ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ
ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಈ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ವಿಚಾರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿ: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಈ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ವಿಚಾರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಿರೇಕೆರೂರು ತಾಲೂಕಿನ ಬಸರೀಹಳ್ಳಿಯ ಹೆಲಿಪ್ಯಾಡ್ ನಲ್ಲಿ ಮಂಗಳವಾರ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳ ಶಾಸಕರಿಗೆ ಸಚಿವ ಸ್ಥಾನ ನೀಡುವುದು ಸಾಧ್ಯವಿಲ್ಲ. ಬೆಂಬಲ ಬೆಲೆ ಯೋಜನೆ ಅನ್ವಯ ರೈತರ ಬೆಳೆ ಖರೀದಿಸಿದಾಗ ಅಗತ್ಯ ಅನುದಾನ ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ ಈ ಭಾರಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಅನುದಾನ ನೀಡಿಲ್ಲ. ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಕೆಲಸ ಮಾಡಬೇಕು. ಆ ಕೆಲಸವನ್ನು ಈಗಿನ ರಾಜ್ಯಪಾಲರು ಮಾಡುತ್ತಿದ್ದಾರೆ. ಅವರ ಬಗ್ಗೆ ನಮಗೆ ಅಸಮಾಧಾನವಿಲ್ಲ. ವಿರೋಧ ಪಕ್ಷದವರ ಅಣತಿಯಂತೆ ನಡೆಯುತ್ತಾರೆ ಎಂಬ ಆರೋಪವು ನಮ್ಮದಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


