ಜಿಲ್ಲಾ ಸುದ್ದಿ

ಕೌಟುಂಬಿಕ ಕಲಹ: ಪತ್ನಿ ಕೊಲೆ

ಪೀಣ್ಯದ ಭುವನೇಶ್ವರಿ ನಗರದಲ್ಲಿ ಕೌಟುಂಬಿಕ ವಿಚಾರವಾಗಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ...

ಕೌಟುಂಬಿಕ ಕಲಹ: ಪತ್ನಿ ಕೊಲೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪೀಣ್ಯದ ಭುವನೇಶ್ವರಿ ನಗರದಲ್ಲಿ ಕೌಟುಂಬಿಕ ವಿಚಾರವಾಗಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಸರೋಜಮ್ಮ(40) ಕೊಲೆಯಾದವರು. ಇವರ ಪತಿ ವೀರಣ್ಣ(50) ಎಂಬಾತನೇ ಕೃತ್ಯ ಎಸಗಿದ್ದು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಮೆಜೆಸ್ಟಿಕ್‍ನಲ್ಲಿ ಬೀದಿ ಬದಿ ವ್ಯಾಪಾರಿಯಾಗಿರುವ ವೀರಣ್ಣ ಹಾಗೂ ಸರೋಜಮ್ಮ 20 ವರ್ಷಗಳ ಹಿಂದೆ ವಿವಾಹವಾಗಿದ್ದು ದಂಪತಿಗೆ 17 ಹಾಗೂ 16 ವರ್ಷದ ಇಬ್ಬರು ಮಕ್ಕಳಿದ್ದಾರೆ.

ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ವೀರಣ್ಣ, ಪತ್ನಿ ಜತೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಮುದ್ದೆ ತಿರುವಲೆಂದು ಇರುವ ದೊಣ್ಣೆ ತೆಗೆದುಕೊಂಡು ಸರೋಜಮ್ಮ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಕುಸಿದು ಬಿದ್ದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದರಿಂದ ಗಾಬರಿಗೊಂಡ ಆರೋಪಿ ಹೊರಗಿನಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದ. ಗುರುವಾರ ಬೆಳಗ್ಗೆ ಮನೆಗೆ ಬಂದ ಆರೋಪಿ, ಬಟ್ಟೆ ಬರೆ ತುಂಬಿಕೊಂಡು ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದಾನೆ. ಅದಕ್ಕೂ ಮೊದಲು ಸಮೀಪದಲ್ಲೇ ವಾಸವಿರುವ ಸಹೋದರನಿಗೆ ಕರೆ ಮಾಡಿ ಸರೋಜಮ್ಮ ಮೃತಪಟ್ಟಿರುವ ಮಾಹಿತಿ ನೀಡಿದ್ದಾನೆ. ಕೂಡಲೇ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವೀರಣ್ಣನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.