ಮಾಜಿ ಸಚಿವ ಬೆಂಕಿ ಮಹಾದೇವ ವಿಧಿವಶ: ನಾಳೆ ನಂಜನಗೂಡಿನಲ್ಲಿ ಅಂತ್ಯಕ್ರಿಯೆ
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಬೆಂಕಿ ಮಹಾದೇವ್ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೈಸೂರು: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಬೆಂಕಿ ಮಹಾದೇವ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 74 ವರ್ಷದ ಮಹಾದೇವ ಎಸ್.ಎಂ.ಕೃಷ್ಣ ಅವಧಿಯಲ್ಲಿ ರೇಷ್ಮೆ ಖಾತೆ ಸಚಿವರಾಗಿದ್ದ ಬೆಂಕಿ ಮಹಾದೇವ ಮೈಸೂರು ಪ್ರಾಂತ್ಯದಲ್ಲಿ ಬೆಂಕಿ ಮಹಾದೇವ ಎಂದೇ ಹೆಸರಾಗಿದ್ದರು. ಸುಮಾರು ಮೂರು ದಶಕಗಳ ಕಾಲ ಕಾಂಗ್ರೆಸ್ ನಲ್ಲಿದ್ದರು.
ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ನಂಜನಗೂಡು ಮೂಲದ ಮಹಾದೇವು ಅವರ ಆರೋಗ್ಯ ಕಳೆದ ಕೆಲ ದಿನಗಳಿಂದ ಏರುಪೇರಾಗಿತ್ತು. ಪಾರ್ಶುವಾಯುಪೀಡಿತರಾಗಿ ಮಹಾದೇವು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವಾದ ಕಾರಣ ಮಹಾದೇವು ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮಹಾದೇವು ವಿಧಿವಶರಾಗಿದ್ದಾರೆ. ನಾಳೆ ಹುಟ್ಟೂರು ನಂಜನಗೂಡಿನಲ್ಲಿ ಬೆಂಕಿ ಮಹಾದೇವು ಅವರ ಅಂತ್ಯಕ್ರಿಯೆ ನಡೆಯಲಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರದಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ ನಂತರ ಸಕ್ರಿಯ ರಾಜಕಾರಣದಿಂದ ಮಹಾದೇವು ಬಹುತೇಕ ದೂರವೇ ಉಳಿದಿದ್ದರು. ಆಗಾಗ್ಗೆ ನಂಜನಗೂಡು ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಪ್ರಗತಿ ಕಂಡು ಬರುತ್ತಿಲ್ಲ ಎಂದು ಪತ್ರಿಕಾಗೋಷ್ಠಿಗಳ ಮೂಲಕ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಆದರೆ ತೀರ ಇತ್ತೀಚೆಗೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ ಕಾರಣ ಬಹಿರಂಗವಾಗಿ ಕಾಣಿಸಿಕೊಳ್ಳುವುದು ಅಪರೂಪವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


