ಯಡಿಯೂರಪ್ಪ ಹೇಳಿಕೆಗೆ ಸಿದ್ದರಾಮಯ್ಯ ವಿರೋಧ
ರಾಜ್ಯ ಸರ್ಕಾರ ರೈತರ ಪರವಲ್ಲ ಎಂದು ಬಿಜೆಪಿ ಸಂಸದ ಬಿ.ಎಸ್. ಯಡಿಯೂರಪ್ಪ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ...

ಬೆಂಗಳೂರು: ರಾಜ್ಯ ಸರ್ಕಾರ ರೈತರ ಪರವಲ್ಲ ಎಂದು ಬಿಜೆಪಿ ಸಂಸದ ಬಿ.ಎಸ್. ಯಡಿಯೂರಪ್ಪ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರತ್ಯೇಕ ಕೃಷಿ ಬಜೆಟ್ ಮೂಲಕ ರೈತರಿಗೆ ನೀಡಿದ್ದ ಅನುದಾನಕ್ಕೂ, ಈಗ ನಮ್ಮ ಸರ್ಕಾರ ನೀಡುತ್ತಿರುವ ಅನುದಾನಕ್ಕೂ ಎಷ್ಟು ವ್ಯತ್ಯಾಸವಿದೆ ಎಂಬುದನ್ನು ಮೊದಲು ಹೇಳಲಿ. ರೈತರ ಆತ್ಮಹತ್ಯೆ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ. ಇದನ್ನು ನಿಯಂತ್ರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿಯೂ ಇದೆ ಎಂದು ಹೇಳಿದರು.
ಪ್ರಧಾನಿ ವಿರುದ್ಧ ಸಿಎಂ ವ್ಯಂಗ್ಯ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಇಬ್ಬರು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿಯೇ ಬಿಟ್ಟಿಲ್ಲ ಎಂದು ಮುಖ್ಯಮಂತ್ರಿ ವ್ಯಂಗ್ಯವಾಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರತಿಬಾರಿ ಸಂಸತ್ ಕಲಾಪ ನಡೆದಾಗ ಬಿಜೆಪಿಯವರು ಅಡ್ಡಿಪಡಿಸಿದ್ದರು. ಆದರೆ, ಯುಪಿಎ ಆಡಳಿತಾವಧಿಯಲ್ಲಿ ಬಿಜೆಪಿ ಸಂಸದರನ್ನು ಅಮಾನತು ಮಾಡಿರಲಿಲ್ಲ. ಈಗ ತಪ್ಪುಗಳನ್ನು ಎತ್ತಿ ತೋರಿಸುವುದಕ್ಕೆ ಮುಂದಾದ ನಮ್ಮ ಸಂಸದರಿಗೆ ಅಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಅವಕಾಶ ನೀಡದೇ ಅಮಾನತು ಮಾಡಿರುವುದು ಖಂಡನೀಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


