ಸುರಕ್ಷತೆ ಜವಾಬ್ದಾರಿ ಶಾಲೆ, ಪಾಲಕರದ್ದು: ಲಲಿತಾ ಕುಮಾರ ಮಂಗಳಂ
ಶಾಲಾ ಮಕ್ಕಳ ಸುರಕ್ಷತೆಯಲ್ಲಿ ಕೇವಲ ಪೊಲೀಸರ ಜವಾಬ್ದಾರಿ ಮಾತ್ರವಲ್ಲದೇ ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರದ್ದು ಪಾತ್ರವಿದೆ...

ಬೆಂಗಳೂರು: ಶಾಲಾ ಮಕ್ಕಳ ಸುರಕ್ಷತೆಯಲ್ಲಿ ಕೇವಲ ಪೊಲೀಸರ ಜವಾಬ್ದಾರಿ ಮಾತ್ರವಲ್ಲದೇ ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರದ್ದು ಪಾತ್ರವಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರ ಮಂಗಳಂ ಹೇಳಿದ್ದಾರೆ.
ಬುಧವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಪದೇ ಪದೇ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಬೆಂಗಳೂರಿನ ಹೆಸರಿಗೆ ಧಕ್ಕೆ ತರುತ್ತಿವೆ. ಅದರಲ್ಲೂ ಪುಟ್ಟ ಕಂದಮ್ಮಗಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳು ಅತ್ಯಂತ ಹೇಯ ಕೃತ್ಯಗಳು. ಇಂತಹ ನೀಚ ಕೃತ್ಯಗಳನ್ನು ಯಾವ ನಾಗರೀಕ ಸಮಾಜವೂ ಸಹಿಸುವುದಿಲ್ಲ. ಅದು ಅತ್ಯಂತ ಅಮಾನವೀಯ. ಅತ್ಯಾಚಾರವೆಸಗುವ ಆರೋಪಿಗೆ ಕಠಿಣದಲ್ಲೇ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ತಿಳಿಸಿದರು.
ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದ ಬಳಿಕ ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಪೊಲೀಸರು ಇಂತಹ ಪ್ರಕರಣಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೂ, ಇದು ಮುಂದುವರಿದಿರುವುದು ದುರದೃಷ್ಟಕರ. ಶಿಕ್ಷಣವನ್ನು ಶಾಲೆಗಳು ವ್ಯವಹಾರವನ್ನಾಗಿ ಮಾಡಿಕೊಂಡಿವೆ. ಶುಲ್ಕದ ನೆಪದಲ್ಲಿ ಸಾಕಷ್ಟು ಹಣ ಪಡೆಯುತ್ತಿವೆ. ಹೀಗಾಗಿ, ಶಾಲೆ ಆವರಣದಲ್ಲಿ ಇರುವ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಸುರಕ್ಷತೆ ನೀಡುವ ಜವಾಬ್ದಾರಿ ಶಾಲೆಗಳ ಆಡಳಿತ ಮಂಡಳಿಯದ್ದು. ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳುವಾಗ ಅವರ ಪೂರ್ವಾಪರ ಪರಿಶೀಲಿಸಬೇಕು ಮಕ್ಕಳ ಪಾಲಕರು ಹಾಗೂ ಪೋಷಕರು ಒಗ್ಗಟ್ಟಾಗಿ ಹೋರಾಟ ಮಾಡಿ ತಮ್ಮ ಮಕ್ಕಳ ಸುರಕ್ಷತೆ ಬಗ್ಗ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯಿಸಬೇಕೆಂದರು.
ಪೊಲೀಸರಿಗೆ ತರಬೇತಿ ಬೇಕು: ಮಹಿಳೆಯರ ವಿರುದ್ಧದ ಪ್ರಕರಣಗಳು ಠಾಣೆಗೆ ಬಂದಾಗ ಅವುಗಳನ್ನು ನಿರ್ವಹಿಸಲು ಪೊಲೀಸರಿಗೆ ತರಬೇತಿ ಬೇಕು. ಮಹಿಳೆಯರ ದೂರುಗಳ ಪೈಕಿ ಶೇ.63ರಷ್ಟು ಕೌಟುಂಬಿಕ ಸಮಸ್ಯೆಗಳು ಇರುತ್ತವೆ. ಮಹತ್ವ ನೀಡುವ ಅಗತ್ಯವಿಲ್ಲ ಎಂದು ಪೊಲೀಸರು ನಿರ್ಲಕ್ಷಿಸಿ ಕಳುಹಿಸುತ್ತಾರೆ. ಆದರೆ, ಇವು ಗಂಭೀರ ಸ್ವರೂಪ ಪಡೆದುಕೊಳ್ಳುತ್ತವೆ. ಹೀಗಾಗಿ, ಮಹಿಳೆಯರ ವಿರುದಟಛಿದ ದೂರುಗಳನ್ನು ನಿರ್ವಹಿಸಲು ತರಬೇತಿ ಕೊಡಿಸಬೇಕು. ಈ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕುಮಾರ ಮಂಗಳಂ ಹೇಳಿದರು ಮಹಿಳೆಯರ ವಿರುದ್ಧದ ಪ್ರಕರಣಗಳು ಠಾಣೆಗೆ ಬಂದಾಗ ಅವುಗಳನ್ನು ನಿರ್ವಹಿಸಲು ಪೊಲೀಸರಿಗೆ ತರಬೇತಿ ಬೇಕು. ಮಹಿಳೆಯರ ದೂರುಗಳ ಪೈಕಿ ಶೇ.63ರಷ್ಟು ಕೌಟುಂಬಿಕ ಸಮಸ್ಯೆಗಳು ಇರುತ್ತವೆ. ಮಹತ್ವ ನೀಡುವ ಅಗತ್ಯವಿಲ್ಲ ಎಂದು ಪೊಲೀಸರು ನಿರ್ಲಕ್ಷಿಸಿ ಕಳುಹಿಸುತ್ತಾರೆ. ಆದರೆ, ಇವು ಗಂಭೀರ ಸ್ವರೂಪ ಪಡೆದುಕೊಳ್ಳುತ್ತವೆ. ಹೀಗಾಗಿ, ಮಹಿಳೆಯರ ವಿರುದಟಛಿದ ದೂರುಗಳನ್ನು ನಿರ್ವಹಿಸಲು ತರಬೇತಿ ಕೊಡಿಸಬೇಕು. ಈ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕುಮಾರ ಮಂಗಳಂ ಹೇಳಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


