ಜಿಲ್ಲಾ ಸುದ್ದಿ

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ: ರಾಯಭಾರಿಗಳಾಗಿ ಪುನೀತ್, ಸುದೀಪ್

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವನ್ನು ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸುತ್ತಿದ್ದು, ಕೇಂದ್ರದ ನಿರ್ದೇಶಕರನ್ನಾಗಿ ಹೊಸಬರನ್ನು ನೇಮಿಸಲಾಗಿದೆ. ..

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ: ರಾಯಭಾರಿಗಳಾಗಿ ಪುನೀತ್, ಸುದೀಪ್
ಸುದೀಪ್ ಮತ್ತು ಪುನೀತ್ ರಾಜ್ ಕುಮಾರ್
Published On :

ಬೆಂಗಳೂರು: ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವನ್ನು ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸುತ್ತಿದ್ದು, ಕೇಂದ್ರದ ನಿರ್ದೇಶಕರನ್ನಾಗಿ ಹೊಸಬರನ್ನು ನೇಮಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಅಧ್ಯಯನ ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ತಿಳಿಸಿದ್ದಾರೆ.

ಅಧ್ಯಯನ ಕೇಂದ್ರವನ್ನು ಮೈಸೂರಿನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಆದರೆ, ಅಲ್ಲಿ ಸಂಶೋಧನಾ ಕೇಂದ್ರದೊಂದಿಗೆ ಒಂದು ಅಂಗವಾಗಿ ಕಾರ್ಯನಿರ್ವಹಿಸಬೇಕಿತ್ತು. ದೇಶದ ಬಹುತೇಕ ಭಾಷಾ ಅಧ್ಯಯನ ಕೇಂದ್ರಗಳು ರಾಜಧಾನಿಯಲ್ಲೇ ಇವೆ. ಹೀಗಾಗಿ ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿಸಿದ್ದಾರೆ. ಬೆಂಗಳೂರು ವಿವಿಯ ಆವರಣದಲ್ಲಿ ಇದಕ್ಕಾಗಿ 3.5 ಎಕರೆ ಭೂಮಿ ಕೂಡ ಮಂಜೂರಾಗಿದೆ. ಕಲಾಕೇಂದ್ರದಲ್ಲಿ ತಾತ್ಕಾಲಿಕವಾಗಿ ಅಧ್ಯಯನ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಧ್ಯಯ ನ ಕೇಂದ್ರಕ್ಕೆ ನಿರ್ದೇಶಕರಾಗಿ ನೇಮಕವಾಗಿದ್ದ ಮಹೇಶ್ವರಯ್ಯ ಕುಲಪತಿಯಾದರು. ಹೀಗಾಗಿ ಹೊಸ ನೇಮಕವಾಗಿದೆ. ಆದರೆ,ತಡೆಯಾಜ್ಞೆ ಇದ್ದು ಸದ್ಯದಲ್ಲೇ ನಿವಾರಣೆಯಾಗಲಿದೆ. ಯೋಜನೆ ನಿರ್ವಹಣೆ ಮಂಡಳಿಗೂ ನೇಮಕವಾಗಿದೆ ಎಂದರು.

ಅನ್ಯ ಭಾಷಿಕರಿಗೆ ಕನ್ನಡ ಭಾಷೆ ಕಲಿಕೆಗೆ `ಕನ್ನಡದಲ್ಲಿ ವ್ಯವಹರಿಸೋಣ' ಎನ್ನುವ ಅಭಿಯಾನ ಆರಂಭಿಸಲು ಪ್ರಾಧಿಕಾರ ನಿರ್ಧರಿಸಿದೆ. ಇದಕ್ಕಾಗಿ ಚಿತ್ರ ನಟರಾದ ಪುನೀತ್ ರಾಜಕುಮಾರ್ ಹಾಗೂ ಸುದೀಪ್ ಅವರನ್ನು ರಾಯಭಾರಿಗಳನ್ನಾಗಿ ಮಾಡಿಕೊಳ್ಳುವ ಉದ್ದೇಶವಿದೆ. ಅವರಿಗೆ ಪತ್ರವನ್ನೂ ಬರೆಯಲಾಗಿದೆ. ಅವರಿಂದ ಉತ್ತರ ಬಂದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಲ್. ಹನುಮಂತಯ್ಯ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.