ಜಿಲ್ಲಾ ಸುದ್ದಿ

ರಾಜಕೀಯ ಪಕ್ಷಗಳಿಗೆ ಹೊಸ ಮಾರ್ಗಸೂಚಿ

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನಾ ರ್ಯಾಲಿ, ಸಭೆ, ಧರಣಿ ನಡೆಸುವ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳಿಗೆ ನೂತನ ಮಾರ್ಗಸೂಚಿಗಳನ್ನು ಜಾರಿಗೊಳಿಸಿ....

ರಾಜಕೀಯ ಪಕ್ಷಗಳಿಗೆ ಹೊಸ ಮಾರ್ಗಸೂಚಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನಾ ರ್ಯಾಲಿ, ಸಭೆ, ಧರಣಿ ನಡೆಸುವ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳಿಗೆ ನೂತನ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಖ್ ಆದೇಶಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ರ್ಯಾಲಿ, ಸಭೆಗಳು ನಡೆಯುವ ಸಂದರ್ಭಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಧಕ್ಕೆ ಉಂಟಾಗುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಯಾವುದೇ ರಾಜಕೀಯ ಪಕ್ಷ, ಸಂಘ ಸಂಸ್ಥೆ ನಗರದಲ್ಲಿ ಮೆರವಣಿಗೆ, ಪ್ರತಿಭಟನೆ ನಡೆಸುವಾಗ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

ಸಭೆ,ರ್ಯಾಲಿ ನಡೆಸುವ ಸ್ಥಳ ಮಾರ್ಗ ಸೇರಿದಂತೆ ವ್ಯಾಪ್ತಿಯ ಡಿಸಿಪಿ ಅವರಿಂದ ಅನುಮತಿ ಪತ್ರ ಪಡೆಯುವುದು ಜೊತೆಗೆ ಸಮಗ್ರ ವಿವರ ಒದಗಿಸಬೇಕು. ಈ ಬಗ್ಗೆ ಪರಿಶೀಲನೆ ನಡೆಸುವ ಡಿಸಿಪಿ ಅವರು ನುಮತಿ ನೀಡುವುದರ ಬಗ್ಗೆ ನಿರ್ಧರಿಸಲಿದ್ದಾರೆ. ಪ್ರತಿಭಟನಾ ಮೆರವಣಿಗೆ ಮಾರ್ಗವನ್ನು ಬದಲಿಸುವ ಅಧಿಕಾರವನ್ನು ಡಿಸಿಪಿ ಹೊಂದಿರುತ್ತಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ, ಸುಗಮ ಸಂಚಾರಕ್ಕೆ ತೊಡಕು ಉಂಟಾದರೆ ಮಾರ್ಗ ಬದಲಾವಣೆ ಮಾಡಲು ಸಲಹೆ ನೀಡಬಹುದು. ಕಾರ್ಯಕ್ರಮದ ವೇಳೆ ಗಲಭೆಗಳು, ಶಾಂತಿ ಸುವ್ಯವಸ್ಥೆ ಹದಗೆಟ್ಟರೇ ಅದಕ್ಕೆ  ಕಾರ್ಯಕ್ರಮ ಸಂಘಟಕರೇ ನೇರ ಹೊಣೆಯಾಗುತ್ತಾರೆ
ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.