ತಲೆನೋವಾದ ಆಪರೇಷನ್ ಸ್ಮೈಲ್
ಗು ಎತ್ತಿಕೊಂಡು ಭಿಕ್ಷಾಟನೆಯಲ್ಲಿ ತೊಡಗಿದ್ದವರ ವಿರುದ್ಧ ಆಪರೇಷನ್ ಸ್ಮೈಲ್ ಹೆಸರಿನ ವಿಶೇಷ ಕಾರ್ಯಾಚರಣೆಯಲ್ಲಿ....

ಬೆಂಗಳೂರು: ಮಗು ಎತ್ತಿಕೊಂಡು ಭಿಕ್ಷಾಟನೆಯಲ್ಲಿ ತೊಡಗಿದ್ದವರ ವಿರುದ್ಧ ಆಪರೇಷನ್ ಸ್ಮೈಲ್ ಹೆಸರಿನ ವಿಶೇಷ ಕಾರ್ಯಾಚರಣೆಯಲ್ಲಿ ರಕ್ಷಿಸಲ್ಪಟ್ಟ 190 ಮಕ್ಕಳ ಪಾಲಕರ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಗುರುವಾರ ನಗರದಾದ್ಯಂತ ಕಾರ್ಯಾಚರಣೆ ನಡೆಸಿದ ಪೊಲೀಸರು, ಎನ್‍ಜಿಒ ಸದಸ್ಯರು ಭಿಕ್ಷಾಟನೆಗೆ ಬಳಕೆಯಾಗಿದ್ದ 190 ಮಕ್ಕಳ ರಕ್ಷಿಸಿ ಎನ್‍ಜಿಒ ಮತ್ತು ಸರ್ಕಾರಿ ಬಾಲಮಂದಿರದಲ್ಲಿ ಆಶ್ರಯ ಕಲ್ಪಿಸಿದ್ದಾರೆ. ಈ ಸಂಬಂಧ 86 ಮಹಿಳೆಯರು ಹಾಗೂ 8 ಪುರುಷರನ್ನೂ ವಶಕ್ಕೆ ಪಡೆದಿದ್ದಾರೆ.
ಮಕ್ಕಳ ಪಾಲಕರು ಮತ್ತು ಪೊಷಕರು ಯಾರು ಎನ್ನುವುದು ಖಚಿತವಾಗುತ್ತಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು. ಮಕ್ಕಳ ಗುರುತು ಪತ್ತೆಗೆ ಡಿಎನ್‍ಎ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಕಡ್ಡಾಯ. ಜತೆಗೆ ಹಲವು ನಿಯಮಗಳ ಪಾಲಿಸಬೇಕಿದ್ದು ಸಾಕಷ್ಟು ಸಮಯಾವಕಾಶ ಬೇಕಾಗುತ್ತದೆ ಎಂದು ಮಾಹಿತಿ ನೀಡಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


