ಜಿಲ್ಲಾ ಸುದ್ದಿ

ಸ್ವಾತಂತ್ರ್ಯ ದಿನಾಚರಣೆಗೆ ಬಿಗಿ ಬಂದೋಬಸ್ತ್

69ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್...

ಸ್ವಾತಂತ್ರ್ಯ ದಿನಾಚರಣೆಗೆ ಬಿಗಿ ಬಂದೋಬಸ್ತ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: 69ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಈಗಾಗಲೇ 60 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಶಾಂತಿಯುತ ಸ್ವಾತಂತ್ರ್ಯ ದಿನಾಚರಣೆಗಾಗಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಎಸ್.ಮೇಘರಿಕ್ ತಿಳಿಸಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ¸ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಆಗಸ್ಟ್ 1ರಿಂದಲೇ ಮೈದಾನವನ್ನು ವಶಕ್ಕೆ ಪಡೆಯಲಾಗಿದೆ. ಮೈದಾನ ಸುತ್ತಮುತ್ತ ಪ್ರಮುಖ ಪ್ರದೇಶಗಳಲ್ಲಿ ಈಗಾಗಲೇ 40 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು ಸಾರ್ವಜನಿಕರ ಚಲನವಲನಗಳ ಮೇಲೆ ತೀವ್ರ ನಿಗಾಇರಿಸಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ಹೇಳಿದರು. ಕಾರ್ಯಕ್ರಮದ ವೇಳೆ ಮೈದಾನದ ಒಳಗೆ ಹಾಗೂ ಹೊರಗೆ ನಗರ ಪೊಲೀಸರು, ಅಧಿಕಾರಿಗಳು, ಮೀಸಲು ಪಡೆ ಪೊಲೀಸ್ ಸೇರಿದಂತೆ 1200 ಸಿಬ್ಬಂದಿಯನ್ನು ಭದ್ರತೆ ನಿಯೋಜಿಸಲಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.