ಜಿಲ್ಲಾ ಸುದ್ದಿ

ಅಧಿಕಾರಕ್ಕೆ ಬಂದರೆ ಬಿಜೆಪಿ ಅಕ್ರಮ ಬಯಲು: ಕಾಂಗ್ರೆಸ್‍ನ ಮಾಜಿ ಮೇಯರ್‍

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಬಿಜೆಪಿ ಆಡಳಿತಾವಧಿಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್‍ನ ಮಾಜಿ ಮೇಯರ್‍ಗಳು ಭರವಸೆ ನೀಡಿದ್ದಾರೆ...

ಅಧಿಕಾರಕ್ಕೆ ಬಂದರೆ ಬಿಜೆಪಿ ಅಕ್ರಮ ಬಯಲು: ಕಾಂಗ್ರೆಸ್‍ನ ಮಾಜಿ ಮೇಯರ್‍
ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಬಿಜೆಪಿ ಆಡಳಿತಾವಧಿಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್‍ನ ಮಾಜಿ ಮೇಯರ್‍ಗಳು ಭರವಸೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್‍ಗಳಾದ ಎಂ.ರಾಮಚಂದ್ರಪ್ಪ, ಪಿ.ಆರ್.ರಮೇಶ್, ಜೆ. ಹುಚ್ಚಪ್ಪ ಅವರು ಕಳೆದ ಬಾರಿ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯನ್ನು ಮಾಧ್ಯಮದ ಮುಂದಿಟ್ಟು, ಈ ಪೈಕಿ ಯಾವ ಭರವಸೆಗಳನ್ನು ಅವರು ಈಡೇರಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಲಿ ಎಂದು ಸವಾಲೆಸೆದರು. ಈಗ ಮತ್ತೆ ಚುನಾವಣೆ ಎದುರಾಗಿರುವುದರಿಂದ ಹಳೆ ಪ್ರಣಾಳಿಕೆಯ ಅಂಶಗಳನ್ನೇ ಜನತೆ ಮುಂದಿಟ್ಟು ವಂಚಿಸಲು ಬಿಜೆಪಿ ಸಂಚು ನಡೆಸಿದೆ. ಈ ಹಿನ್ನೆಲೆಯಲ್ಲಿ ಅವರ ಹಳೆ ಭರವಸೆಗಳನ್ನು ಬೆತ್ತಲೆಗೊಳಿಸಲು ಈ ಪತ್ರಿಕಾಗೋಷ್ಠಿ ನಡೆಸಲಾಗಿದೆ ಎಂದರು.

ಐದು ವರ್ಷ ಸುಳ್ಳೇಸುಳ್ಳು: ಮಾಜಿ ಮೇಯರ್ ಎಂ. ರಾಮಚಂದ್ರಪ್ಪ ಮಾತನಾಡಿ, ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಎಲ್ಲ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಬಿಜೆಪಿಯವರು 2010ರಲ್ಲಿ ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಐದು ವರ್ಷ ಬರಿ ಸುಳ್ಳು ಹೇಳಿಕೊಂಡು ಓಡಾಡಿದ್ದಾರೆ. ನಾಳೆ ಬಿಡುಗಡೆ ಮಾಡುವ ಪ್ರಣಾಳಿಕೆಯಲ್ಲೂ ಇದೇ ಸಂಗತಿಗಳನ್ನು ಹೇಳುತ್ತಾರೆ.

ಕಳೆದ ಐದು ವರ್ಷದ ಅವಧಿಯಲ್ಲಿ ಅವರು ಒಂದೇ ಒಂದು ಫ್ಲೈಓವರ್ ಕಟ್ಟಿಸಿಲ್ಲ, ಆಸ್ಪತ್ರೆಗಳ ನಿರ್ಮಾಣ ಮಾಡಿಲ್ಲ. ಹೊಸ ಮಾರುಕಟ್ಟೆಗಳ ರಚನೆಯಾಗಿಲ್ಲ ಎಂದು ವ್ಯಂಗ್ಯವಾಡಿದರು. ಕಳೆದ ಐದು ವರ್ಷದ ಅವಧಿಯಲ್ಲಿ ಏನೆಲ್ಲ ಅವಾಂತರ ನಡೆದಿದೆ ಎಂಬುದಕ್ಕೆ ಕಟಾರಿಯಾ ವರದಿಯೇ ಸಾಕ್ಷಿ. ನಾವು ಅಧಿಕಾರಕ್ಕೆ ಬಂದರೆ ಈ ವರದಿ ಅನುಸಾರ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಮಾಜಿ ಮೇಯರ್ ಪಿ.ಆರ್.ರಮೇಶ್ ಮಾತನಾಡಿ, ನಿಮ್ಮ ಕನಸು ನಮ್ಮ ಸಂಕಲ್ಪ ಎಂಬ ಹೆಸರಿನೊಂದಿಗೆ ಬಿಜೆಪಿ ಜನತೆಯ ಮುಂದಿಟ್ಟ ಪ್ರಣಾಳಿಕೆಗಳ ಪೈಕಿ ಏನನ್ನೂ ಈಡೇರಿಸಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.