ಅನೈತಿಕ ಸಂಬಂಧ: ನೆರೆಮನೆಯವನಿಂದಲೇ ರೀನಾ ಮಾಲಗತ್ತಿ ಹತ್ಯೆ
ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದ ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ...

ಬೆಳಗಾವಿ: ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದ ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಎಪಿಎಂಸಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಪಕ್ಕದ ಮನೆಯ ಪ್ರವೀಣ್ ಭಟ್ ಎಂಬಾತನನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದು, ಪ್ರವೀಣ್ ಭಟ್ ಮತ್ತು ರೀನಾ ಮಾಲಗತ್ತಿ ನಡುವೆ ಇದ್ದ ಅನೈತಿಕ ಸಂಬಂಧ, ಕೊಲೆ ಮಾಡುವ ಹಂತಕ್ಕೆ ತಲುಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಬೆಳಿಗ್ಗೆ 8.30ರ ಸುಮಾರಿಗೆ ರೀನಾ ಮಾಲಗತ್ತಿ ಮನೆಗೆ ಬಂದ ಪ್ರವೀಣ್ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಅವರ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಈ ಬಗ್ಗೆ ರೀನಾ ಪತಿ ರಾಕೇಶ್ ಹಾಗೂ ಸಂಬಂಧಿಕರನ್ನು ವಿಚಾರಿಸಿ, ಹಲವು ಮಾಹಿತಿ ಸಂಗ್ರಹಿಸಿಲಾಗಿತ್ತು. ಮಾಹಿತಿ ಆಧಾರದ ಮೇರೆಗೆ ನೆರೆಮನಯ ಪ್ರವೀಣ್ ಭಟ್ ಎಂಬುವವನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಬೆಳಗಾವಿಯ ಕುವೆಂಪುನಗರದಲ್ಲಿ ರೀನಾ ಮಾಲಗತ್ತಿ(35) ಮಕ್ಕಳಾದ ಆದಿತ್ಯ(11) ಮತ್ತು ಸಾಹಿತ್ಯ(4) ಎಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ರೀನಾ ಪತಿ ಗೋವಾದ ಸಂಬಂಧಿಕರೊಬ್ಬರ ಮನೆಗೆ ತೆರಳಿದ್ದ ವೇಳೆ ಈ ಕೃತ್ಯ ನಡೆದಿತ್ತು. ಭಾನುವಾರ ಬೆಳಗ್ಗೆ ರೀನಾ ಪತಿ ಮನೆಗೆ ಕರೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


