ಎಸ್‍ಐಟಿಯಿಂದ ಕಾಂಗ್ರೆಸ್ ಕಾರ್ಯಕರ್ತನ ಸೆರೆ
ಲೋಕಾಯುಕ್ತ ಕಚೇರಿ ಭ್ರಷ್ಟಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳು ರಾಜ್ಯದ ಕಾಂಗ್ರೆಸ್ ಮುಖಂಡನೊಂದಿಗೆ ಗುರುತಿಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸಾಧಿಕ್ ಪಾಷಾ(45) ಎಂಬಾತನನ್ನು ಭಾನುವಾರ ಬಂಧಿಸಿದ್ದಾರೆ...

ಬೆಂಗಳೂರು: ಲೋಕಾಯುಕ್ತ ಕಚೇರಿ ಭ್ರಷ್ಟಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳು ರಾಜ್ಯದ ಕಾಂಗ್ರೆಸ್ ಮುಖಂಡನೊಂದಿಗೆ ಗುರುತಿಸಿ-
ಕೊಂಡಿದ್ದ ಮತ್ತೊಬ್ಬ ಆರೋಪಿ ಸಾಧಿಕ್ ಪಾಷಾ(45) ಎಂಬಾತನನ್ನು ಭಾನುವಾರ ಬಂಧಿಸಿದ್ದಾರೆ.
ಇದರೊಂದಿಗೆ ಎಸ್‍ಐಟಿ ಅಧಿಕಾರಿಗಳಿಂದ ಬಂಧಿತನಾಗಿರುವ 7ನೇ ಆರೋಪಿ ಸಾಧಿಕ್ ಆಗಿದ್ದಾನೆ. ಭಾನುವಾರ ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.
ಸೋಮವಾರ ಮಧ್ಯಾಹ್ನ ಆರೋಪಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಆರೋಪಿಯನ್ನು ಕೆಪಿಸಿಸಿ ಸದಸ್ಯ ಉದ್ಯಮಿ ಕೃಷ್ಣಮೂರ್ತಿ ಎಂಬುವರು ದಾಖಲಿಸಿದ್ದ ಪ್ರಕರಣ ಸಂಖ್ಯೆ 60ರಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಕರಣದ ಬಗ್ಗೆ ಆರೋಪಿ ಸಾಧಿಕ್ ಪಾಷಾನ ವಿಚಾರಣೆ ನಡೆಸಬೇಕಿರುವ ಕಾರಣ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ಆ.20ರವರೆಗೆ ಕಸ್ಟಡಿ ನೀಡಿ ಆದೇಶಿಸಿತು.
ಯಾರೀ ಸಾಧಿಕ್ ?
ಜಮೀನಿಗೆ ಸಂಬಂಧಿಸಿದ ಕೆಲಸಗಳು ಬಿಬಿಎಂಪಿಯಿಂದ ಆಗಬೇಕಿದ್ದ ಕಾರಣ ಕೃಷ್ಣಮೂರ್ತಿ ಓಡಾಡುತ್ತಿದ್ದರು. ಈ ಹಂತದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಭೇಟಿಯಾದ ಸಾಧಿಕ್ ಪಾಷಾ ತನಗೆ ಪ್ರಬಲ ವ್ಯಕ್ತಿಗಳೊಂದಿಗೆ ಸಂಪರ್ಕವಿದ್ದು ನಿಮ್ಮ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ರು.10 ಲಕ್ಷ ಪಡೆದಿದ್ದ. ಅದರಂತೆ ಸಾಧಿಕ್ ಪಾಷಾ ನ್ಯಾ. ವೈ.ಭಾಸ್ಕರ್‍ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ಭೇಟಿ ಮಾಡಿಸಿದ್ದು ಎಂದು ತಿಳಿದು ಬಂದಿದೆ. ಕೇಂದ್ರ ಹಾಗೂ ರಾಜ್ಯದ ನಿಗಮ ಮಂಡಲಿಗಳಲ್ಲಿ ಅಧ್ಯಕ್ಷರ ಸ್ಥಾನ ಕೊಡಿಸುವುದಾಗಿ ಕೃಷ್ಣಮೂರ್ತಿ ಅವರನ್ನು ಎರಡು ಬಾರಿ ಸಾಧಿಕ್ ಪಾಷಾ ದೆಹಲಿಗೂ ಕರೆದುಕೊಂಡು ಹೋಗಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


