ಬೆಂಗಳೂರಿನಲ್ಲಿ ಇಬ್ಬರು ಕುಖ್ಯಾತ ಸರಗಳ್ಳರ ಬಂಧನ: 23 ಚಿನ್ನದ ಸರ ವಶ
ಮಹಿಳೆಯರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಪ್ರಕರಣವನ್ನು ಬೇಧಿಸಿದ ನಗರ ಪೊಲೀಸರು ಇಬ್ಬರು ಕುಖ್ಯಾತ...

ಬೆಂಗಳೂರು: ಮಹಿಳೆಯರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಪ್ರಕರಣವನ್ನು ಬೇಧಿಸಿದ ನಗರ ಪೊಲೀಸರು ಇಬ್ಬರು ಕುಖ್ಯಾತ ಸರಗಳ್ಳರನ್ನು ಬುಧವಾರ ಬಂಧಿಸಿದ್ದಾರೆ.
ಮಹಮ್ಮದ್ ಜಬೀವುದ್ದೀನ್ ಮತ್ತು ಮಹಮ್ಮದ್ ಮೆಹ್ತಾಬ್ ಬಂಧಿತ ಆರೋಪಿಗಳು. ಇತ್ತೀಚೆಗೆ ಮಹಿಳೆಯರ ಚಿನ್ನದ ಸರ ಕಸಿದು ಪರಾರಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದಂತೆ ದಕ್ಷಿಣ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರು ಸರಗಳ್ಳರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬಂಧಿತ ಆರೋಪಿಗಳಿಂದ ರು.21ಲಕ್ಷ ಮೌಲ್ಯದ 23 ಚಿನ್ನದ ಸರಗಳು ವಶಕ್ಕೆ ಪಡೆಯಲಾಗಿದ್ದು, ಇಬ್ಬರ ಬಂಧನದಿಂದಾಗಿ 23 ಸರಗಳ್ಳತನ ಪ್ರಕರಣ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


