ಮಹದಾಯಿ ನೀರಿಗಾಗಿ ನಾಳೆ ಧಾರವಾಡ ಬಂದ್
ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಜೋಡಣೆ ಅನುಷ್ಠಾನಕ್ಕಾಗಿ ಆ.22 ರಂದು ಧಾರವಾಡ ಬಂದ್ ಆಚರಿಸಲು ಪಕ್ಷಾತೀತ ಹೋರಾಟ ಸಮಿತಿ ಕರೆ ನೀಡಿದೆ.

ಧಾರವಾಡ: ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಜೋಡಣೆ ಅನುಷ್ಠಾನಕ್ಕಾಗಿ ಆ.22 ರಂದು ಧಾರವಾಡ ಬಂದ್ ಆಚರಿಸಲು ಪಕ್ಷಾತೀತ ಹೋರಾಟ ಸಮಿತಿ ಕರೆ ನೀಡಿದೆ. ಬೆಳಿಗ್ಗೆ 6 ರಿಂದ ಸಂಜೆ 6 ವರೆಗೆ ಬಂದ್ ನಡೆಯಲಿದೆ.
ಆ.24 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಪ್ರಧಾನಮಂತ್ರಿಯವರನ್ನು ಭೇಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಬಂದ್ ಮಹತ್ವದ್ದಾಗಿದೆ ಎಂದು ಸಮಿತಿ ಸಂಚಾಲಕ ಬಿ.ಡಿ ಹಿರೇಮಠ ಹೇಳಿದರು.
ದಕ್ಷಿಣ ಕರ್ನಾಟಕದ ಈ ಹಿಂದಿನ ಮಹತ್ವದ ಹೋರಾಟಗಳಲ್ಲಿ ಮುಖ್ಯಮಂತ್ರಿ ಆದಿಯಾಗಿ ಸಚಿವ ಸಂಪುಟವೇ ಹೋರಾಟಗಾರರ ಬಳಿ ಬಂದು ಸಮಸ್ಯೆಯನ್ನು ಆಲಿಸಿ ಪರಿಹಾರ ದೊರೆಕಿಸಿದೆ. ಆದರೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಎಲ್ಲರೂ ನಿರಾಸಕ್ತಿ ತೋರುತ್ತಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


