ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ: ಪೊಲೀಸರ ಪಥ ಸಂಚಲನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಪೊಲೀಸ್ ಅ„ಕಾರಿಗಳು ಹಾಗೂ ಸಿಬ್ಬಂದಿ ಗುರುವಾರ ವಿವಿಧ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು...

ಬಿಬಿಎಂಪಿ ಚುನಾವಣೆ: ಪೊಲೀಸರ ಪಥ ಸಂಚಲನ
ಬಿಬಿಎಂಪಿ ಚುನಾವಣೆ: ಪೊಲೀಸರ ಪಥ ಸಂಚಲನ (ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗುರುವಾರ ವಿವಿಧ ರಸ್ತೆಗಳಲ್ಲಿ
ಪಥಸಂಚಲನ ನಡೆಸಿದರು.

ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅತಿ ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮತ್ತು ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಸಂಬಂಧ ರಸ್ತೆ ಪಥ ಸಂಚಲನ ನಡೆಸಲಾಯಿತು.

ಬಂಡೇಪಾಳ್ಯ ವೃತ್ತದಿಂದ ಆರಂಭವಾದ ಪಥಸಂಚಲನ ಮುನೇಶ್ವರ ಲೇಔಟ್, ಮಥುರ ಗಾರ್ಮೆಂಟ್ಸ್ ರಸ್ತೆ, ಮದೀನ ನಗರ ಹಾಗೂ ಅತಿಸೂಕ್ಷ್ಮ ಮತಗಟ್ಟೆ ಪ್ರದೇಶಗಳಾದ ಮಂಗಮ್ಮನ ಪಾಳ್ಯ, ಉರ್ದು ಸ್ಕೂಲ್ ರಸ್ತೆ, ಇಲ್ಮಾ ಸ್ಕೂಲ್ ರಸ್ತೆ, ಟಿಂಬರ್ ಗಲ್ಲಿ ರಸ್ತೆ, ಮಂಗಮ್ಮನಪಾಳ್ಯ ಮುಖ್ಯರಸ್ತೆ, ಸಿಟಿಜನ್ ಬೇಕರಿ ರಸ್ತೆಗಳಲ್ಲಿ ಪಥಸಂಚಲನ ನಡೆಸಿ ಹೆಚ್.ಎಸ್.ಆರ್. ಲೇಔಟ್ 2ನೇ ಸೆಕ್ಟರ್ ಸರ್ಕಾರಿ ಶಾಲೆಯ ಆವರಣದಲ್ಲಿ ಮುಕ್ತಾಯವಾಯಿತು. ಮಡಿವಾಳ ಉಪವಿಭಾಗದ ಪೊಲೀಸ್ ಅ„ಕಾರಿ, ಸಿಬ್ಬಂದಿ, 2 ಕೆಎಸ್‍ಆರ್‍ಪಿ ತುಕಡಿ, ಗೃಹರಕ್ಷಕ ದಳ ಸಿಬ್ಬಂದಿ ಸೇರಿ 150 ಅ„ಕಾರಿ ಮತ್ತು ಸಿಬ್ಬಂದಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.