ರೂ.20 ಕೋಟಿ ಮೌಲ್ಯದ ಕೊಕೇನ್ ವಶ
ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಾದಕವಸ್ತು ತರುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಮಾದಕವಸ್ತು ನಿಯಂತ್ರಣ ...

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಾದಕವಸ್ತು ತರುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್‍ಸಿಬಿ )ಅಧಿಕಾರಿಗಳು ರೂ. 20 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಣೆಗೆ ಯತ್ನಿಸಿದ್ದಪೆರುಗ್ವೆ ದೇಶದ ಪ್ರಜೆಯನ್ನು ಬಂಧಿಸಲಾಗಿದೆ.
19 ವರ್ಷ ವಯಸ್ಸಿನ ಈ ಆರೋಪಿ ಆ. 18ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಸುಳಿವಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಬ್ರೆಜಿಲ್‍ನಿಂದ ದುಬೈ ಮಾರ್ಗವಾಗಿ ಭಾರತಕ್ಕೆ ಕೊಕೇನ್ ತರಲಾಗುತ್ತಿತ್ತು. ಆರೋಪಿಯು ಪ್ರಯಾಣಿಕರ ಲಗೇಜ್ನ ಲ್ಲಿ 3 ಕೆಜಿ 337 ಗ್ರಾಮ್ ಕೊಕೇನ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಸದ್ಯಕ್ಕೆ ಈತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ. `ಕೊಕೇನ್ ಯಾರಿಗೆ ತಲುಪಿಸಬೇಕು ಎಂಬುದು ಗೊತ್ತಿಲ್ಲ. ಆದರೆ, ಭಾರತ ತಲುಪಿದ ನಂತರ ಸ್ವೀಕರಿಸುವವರಿಂದಲೇ ಕರೆ ಬರುತ್ತದೆ ಎಂದು ಸ್ಮಗ್ಲರ್‍ಗಳು ಹೇಳಿದ್ದರು ಎಂದು ಎನ್‍ಸಿಬಿ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


