ಮತ್ತೋರ್ವ ರೈತ ಆತ್ಮಹತ್ಯೆಗೆ ಶರಣು
ರೈತರ ಆತ್ಮಹತ್ಯೆ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಭಾನುವಾರ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿರುವ...

ಚಿಕ್ಕಬಳ್ಳಾಪುರ: ರೈತರ ಆತ್ಮಹತ್ಯೆ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಭಾನುವಾರ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜುಂಜಾನಹಳ್ಳಿಯಲ್ಲಿ ರೈತನೊಬ್ಬ ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ.
ವೆಂಕಟಶಿವರೆಡ್ಡಿ (30) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿ ಬೆಳೆದಿದ್ದ ಶೇಂಗಾ ಬೆಳೆ ನಾಶವಾಗಿತ್ತು. ಅಲ್ಲದೇ, ರು.1.5 ಲಕ್ಷ ರುಪಾಯಿ ಕೈಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


