ಪೊಲೀಸ್ ಕೆಲಸ ಬಿಟ್ಟು ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸವಿತಾಗೆ ಜಯ
ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶ್ರೀನಗರ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿದಿದ್ದ...

Published On :
ಬೆಂಗಳೂರು: ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶ್ರೀನಗರ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿದಿದ್ದ ಸವಿತಾ ಅವರು ಗೆಲುವು ಸಾಧಿಸಿದ್ದಾರೆ.
ಶ್ರೀನಗರ ವಾರ್ಡ್ ಭಾರೀ ಜಿದ್ದಾಜಿದ್ದಿನಿಂದ ಕೂಡಿತ್ತು. ಅಂತಿಮ ಹಂತದ ಮತ ಎಣಿಕೆಯಲ್ಲಿ ಸವಿತಾ ಮುನ್ನಡೆ ಸಾಧಿಸಿ ವಿಜಯದ ನಗೆ ಬೀರಿದ್ದಾರೆ. ಕಳೆದ ಬಾರಿಯ ಬಿಬಿಎಂಪಿ ಚುನಾವಣೆಯಲ್ಲಿ ಸವಿತಾ ಅವರ ತಂದೆ ಮಾಯಣ್ಣ ಗೌಡರು ಕಣಕ್ಕಿಳಿದಿದ್ದು, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ದರು.
ಈ ಬಾರಿ ಶ್ರೀನಗರ ವಾರ್ಡ್ ಜನತೆ ಮಾಯಣ್ಣ ಗೌಡರ ಪುತ್ರಿ ಸವಿತಾ ಅವರನ್ನು ಗೆಲ್ಲಿಸುವ ಮೂಲಕ ವಾರ್ಡ್ ಅಭಿವೃದ್ದಿಗೆ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿದ್ದಾರೆ. ತಮ್ಮ ಗೆಲುವಿನ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ವಿಜೇತ ಅಭ್ಯರ್ಥಿ ಸವಿತಾ, ಪೊಲೀಸ್ ಇಲಾಖೆಯಲ್ಲಿದ್ದಾಗಲೂ ಸಾರ್ವಜನಿಕ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಈಗ ಬಿಬಿಎಂಪಿ ಗೆ ಆಯ್ಕೆಯಾಗಿರುವ ಕಾರಣ ಇನ್ನಷ್ಟು ಪರಿಣಾಮಕಾರಿಯಾಗಿ ಜನಸೇವೆ ಮಾಡುವ ಭಾಗ್ಯ ಒದಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


