ಜಿಲ್ಲಾ ಸುದ್ದಿ

ಲೋಕಾ ರಿಜಿಸ್ಟ್ರಾರ್ ಜಾಫರ್ ನೇಮಕಕ್ಕೆ ಹೈಕೋರ್ಟ್ ತಡೆ

ಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಡಾ.ಪಿ.ಸಿ.ಜಾಫರ್ ನೇಮಕ ಮಾಡಿ ಆದೇಶಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‍ನ ಈ ಆದೇಶದಿಂದ ರಾಜ್ಯ ಸರ್ಕಾರ ಭಾರಿ...

ಲೋಕಾ ರಿಜಿಸ್ಟ್ರಾರ್ ಜಾಫರ್ ನೇಮಕಕ್ಕೆ ಹೈಕೋರ್ಟ್ ತಡೆ
ಕರ್ನಾಟಕ ಹೈ ಕೋರ್ಟ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಡಾ.ಪಿ.ಸಿ.ಜಾಫರ್ ನೇಮಕ ಮಾಡಿ ಆದೇಶಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್‍ನ ಈ ಆದೇಶದಿಂದ ರಾಜ್ಯ ಸರ್ಕಾರ ಭಾರಿ ಮುಖಭಂಗ ಅನುಭವಿಸುವಂತಾಗಿದೆ.

ಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಜಾಫರ್ ಅವರನ್ನು ಆ.6ರಂದು ಸರ್ಕಾರ ನೇಮಕಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕೀಲ ಆನಂದಮೂರ್ತಿ ಹೈಕೋಟ್ರ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್.ಕೆ.ಮುಖರ್ಜಿ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಮೇಲ್ನೋಟಕ್ಕೆ ಈ ಪ್ರಕರಣ ಅರ್ಜಿದಾರರ ಪರವಾಗಿದ್ದು, ರಿಜಿಸ್ಟ್ರಾರ್ ಹುದ್ದೆಗೆ ರಾಜ್ಯ ಸರ್ಕಾರ ಜಾಫರ್ ಅವರನ್ನು ನೇಮಕಗೊಳಿಸಿದ ಆದೇಶಿಸಿದ ಕ್ರಮಕ್ಕೆ ತಡೆಯಾಜ್ಞೆ ನೀಡಿ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ರಾಜ್ಯ ಹೈಕೋರ್ಟ್ ಮತ್ತು ಜಾಫರ್ ಅವರಿಗೆ ನೋಟಿಸ್ ಜಾರಿ ಮಾಡಿ ಮಧ್ಯಂತರ ಆದೇಶ ಹೊರಡಿಸಿದೆ.

ಸಂವಿಧಾನದ ಪರಿಚ್ಛೇದ 50ರ, ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ಕ್ಕೆ ರಿಜಿಸ್ಟ್ರಾರ್ ನೇಮಕ ವಿರುದಟಛಿವಾಗಿದೆ. ಈ ಹುದ್ದೆಗೆ ನೇಮಕ ಮಾಡಬೇಕಾದಲ್ಲಿ ಲೋಕಾಯುಕ್ತ ಅವರಒಪ್ಪಿಗೆಪಡೆದಿರಬೇಕು. ಆದರೆ, ಈ ಪ್ರಕರಣದಲ್ಲಿ ಲೋಕಾಯುಕ್ತ ಒಪ್ಪಿಗೆ ಪಡೆಯದೇ ರಿಜಿಸ್ಟ್ರಾರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ. ಅಲ್ಲದೇ ಕರ್ನಾಟಕ ಲೋಕಾಯುಕ್ತ (ವೃಂದ, ನೇಮಕ ಮತ್ತು ಅಧಿಕಾರಿಗಳ ಹಾಗೂ ನೌಕರರ ಸೇವಾವಧಿ) ನಿಯಮ 1988ರ ಪ್ರಕಾರವೂ ರಿಜಿಸ್ಟ್ರಾರ್ ನೇಮಕ ನಡೆದಿಲ್ಲ ಎಂದು ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಂ ವಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.